ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟರ್ಮಿನೇಟರ್‌ ತಳಿ ಪ್ರಯೋಗಕ್ಕೆ ಅನುಮತಿ ಇಲ್ಲ - ಜಯಚಂದ್ರ

By Staff
|
Google Oneindia Kannada News

ಬೆಂಗಳೂರು : ಟರ್ಮಿನೇಟರ್‌ ತಳಿ ತಂತ್ರಜ್ಞಾನ ಪ್ರಯೋಗಕ್ಕೆ ಕರ್ನಾಟಕದಲ್ಲಿ ಅನುಮತಿ ನೀಡಿಲ್ಲ ಎಂದು ಕೃಷಿ ಸಚಿವ ಟಿ.ಬಿ. ಜಯಚಂದ್ರ ರಾಜ್ಯ ವಿಧಾನ ಪರಿಷತ್ತಿನಲ್ಲಿ ಬುಧವಾರ ಸ್ಪಷ್ಟ ಪಡಿಸಿದ್ದಾರೆ.

ಜಾತ್ಯತೀತ ಜನತಾದಳದ ಸದಸ್ಯ ಬಸವರಾಜ ಬೊಮ್ಮಾಯಿ ಅವರ ಪ್ರಶ್ನೆಯಾಂದಕ್ಕೆ ಉತ್ತರ ನೀಡುತ್ತಿದ್ದ ಅವರು, ಬೋರರ್‌ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಹೈಬ್ರಿಡ್‌ ಸೀಡ್ಸ್‌ ಕಂಪೆನಿಗೆ ಮಾತ್ರ ಕೇಂದ್ರದ ಅನುಮತಿಯಾಂದಿಗೆ 14 ಪ್ರದೇಶಗಳಲ್ಲಿ ಬಿಟಿ ಹತ್ತಿಯ ಹೈಬ್ರಿಡ್‌ ತಳಿಯ ಪ್ರಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಕೆಲವು ರಾಜ್ಯಗಳು ಇಂತಹ ಪ್ರಯತ್ನಗಳನ್ನು ಆರಂಭಿಸಿವೆ ಎಂದರು.

ಇತರ ರಾಜ್ಯಗಳಿಂದ ಹೈಬ್ರಿಡ್‌ ತಳಿ ರಾಜ್ಯದೊಳಕ್ಕೆ ಕಳ್ಳದಾರಿಯಲ್ಲಿ ಬಾರದಂತೆ ನೋಡಿಕೊಳ್ಳಲಾಗುವುದು. ಈಗಾಗಲೇ 12 ಮಂದಿಯ ಸಮಿತಿಯಾಂದು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಬಿಟಿ ಹತ್ತಿಗೆ ಬಂದಿರುವ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹತ್ತಿ ಬೆಳೆಯುವುದನ್ನು ಕೈಬಿಡಲಾಗಿದೆ. ಈ ಬಗ್ಗೆ ರೈತರು ಹೆದರಬೇಕಾದ ಅವಶ್ಯಕತೆ ಇಲ್ಲ. ಹೊಸ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ತಿಳಿಸುವುದು ಸರಕಾರದ ಕರ್ತವ್ಯವಾಗಿದ್ದು, ಸರಕಾರ ಅದಕ್ಕೆ ಬದ್ಧವಾಗಿದೆ ಎಂದು ಹೇಳಿದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X