ಗುಲ್ಬರ್ಗಾ : ಅಮೆರಿಕ ಏಜನ್ಸಿಗೆ ಲಂಬಾಣಿ ಹೆಣ್ಣು ಮಕ್ಕಳ ಮಾರಾಟ
ಗುಲ್ಬರ್ಗಾ : ಜಿಲ್ಲೆಯ ಲಂಬಾಣಿ ತಾಂಡದ ಹೆಣ್ಣು ಮಕ್ಕಳನ್ನು ಅಮೆರಿಕದ ಏಜೆನ್ಸಿಯಾಂದಕ್ಕೆ ವ್ಯವಸ್ಥಿತ ಜಾಲವೊಂದು ಮಾರಾಟ ಮಾಡುತ್ತಿದ್ದು , ಈ ಕುರಿತು ತಕ್ಷಣವೇ ತನಿಖೆ ಪ್ರಾರಂಭಿಸಬೇಕೆಂದು ಅಖಿಲ ಭಾರತ ಬಂಜಾರಾ ಸೇವಾ ಸಮಿತಿ ಸರಕಾರವನ್ನು ಆಗ್ರಹಿಸಿದೆ.
ಇತ್ತೀಚೆಗೆ ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ ಇಬ್ಬರು ಆರೋಪಿಗಳಿಂದ ಈ ಮಾಹಿತಿ ದೊರೆತಿದೆ. 60 ದಿನಗಳಿಂದ 5 ವರ್ಷದೊಳಗಿನ ಹೆಣ್ಣು ಮಕ್ಕಳನ್ನು ಎರಡು ಸಾವಿರ ರೂಪಾಯಿಗೆ ಮಾರಲಾಗುತ್ತಿದೆ. ಕಳೆದ ಆರು ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದು, ಸುಮಾರು 200 ಮಕ್ಕಳ ಮಾರಾಟವಾಗಿದೆ ಎಂದು ಬಂಜಾರಾ ಸಮಿತಿಯ ಮುಖ್ಯ ಕಾರ್ಯದರ್ಶಿ ಸುಭಾಷ್ ರಾತೋಡ್ ಬುಧವಾರ ಗುಲ್ಬರ್ಗಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂಶಯಾಸ್ಪದ ರೀತಿಯಲ್ಲಿ ಹಸುಳೆಯಾಂದನ್ನು ಆಸ್ಪತ್ರೆಯಿಂದ ಸಾಗಿಸುತ್ತಿದ್ದಾಗ ಬಂಧನಕ್ಕೊಳಗಾದ ಒಬ್ಬ ನರ್ಸ್ ಸೇರಿದಂತೆ ಇಬ್ಬರು ವ್ಯಕ್ತಿಗಳಿಂದ ಈ ಜಾಲ ಬಯಲಿಗೆ ಬಂದಿದೆ. ಜಾಲಕ್ಕೆ ಸಿಲುಕುವ ಹೆಣ್ಣು ಮಕ್ಕಳನ್ನು ಮೊದಲು ಹೈದರಾಬಾದಿನ ಅನಾಥಾಲಯಕ್ಕೆ ಸಾಗಿಸಲಾಗುತ್ತದೆ. ನಂತರ ಅಮೆರಿಕಾದ ಏಜೆನ್ಸಿಯಾಂದಕ್ಕೆ ಮಾರಲಾಗುತ್ತದೆ. ಪೆಡ್ಡಾ, ಒಂಟಿ ಚಿಂತಾ ಮತ್ತು ಕೊಂಚಾವರಂ ಪ್ರದೇಶದಲ್ಲಿ ಹೆಚ್ಚು ಮಂದಿ ಮಕ್ಕಳ ಮರಾಟವಾಗುತ್ತಿರುವುದು ತಿಳಿದು ಬಂದಿದೆ ಎಂದು ಸುಭಾಷ್ ಹೇಳಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications