ವ್ಯವಸ್ಥೆಗೆ ಗುದ್ದು ನೀಡಲು ಏ.2 ರಂದುರೈತರಿಂದ ಕರಾಳ ದಿನಾಚರಣೆ
ಮಂಡ್ಯ : ಜಾಗತೀಕರಣ ಮತ್ತು ಉದಾರೀಕರಣದಿಂದಾಗಿ ರಾಜ್ಯದ ರೈತರು ಬೆಳೆದ ಬೆಳೆಗಳಿಗೆ ಮೂರು ಕಾಸಿನ ಬೆಲೆಯೂ ಸಿಗದಿರುವಾಗ, ಕೃಷಿ ಕೈಗಾರಿಕಾ ಕ್ಷೇತ್ರಗಳನ್ನು ರಕ್ಷಿಸುವತ್ತ ಸರಕಾರ ಗಮನ ಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘವು ಏಪ್ರಿಲ್ ಎರಡರಂದು ಕರಾಳ ದಿನ ಆಚರಿಸಲಿದೆ ಎಂದು ಸಂಘದ ಅಧ್ಯಕ್ಷ ಕೆ. ಎಸ್ ಪುಟ್ಟಣ್ಣಯ್ಯ ಹೇಳಿದ್ದಾರೆ.
ಪುಟ್ಟಣ್ಣಯ್ಯ ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಏಪ್ರಿಲ್ ಎರಡರಂದು ಮಂಡ್ಯದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಲಾಗುವುದು. ಬೆಳಿಗ್ಗೆ ಹನ್ನೊಂದು ಗಂಟೆಗೆ ಸಿಲ್ವರ್ ಜ್ಯೂಬಿಲಿ ಹಾಲ್‌ನಿಂದ ಚೆಡ್ಡಿ ತೊಟ್ಟ ಸಾವಿರಾರು ಮಂದಿ ರೈತರು ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸುವರು. ಕೊಂಬು, ಜಾಗಟೆ, ನಗಾರಿ, ತಮಟೆಗಳನ್ನು ಬಾರಿಸುತ್ತಾ ಮೆರವಣಿಗೆ ಹೊರಡುವ ರೈತರು ಕೈಯಲ್ಲಿ ಭಿಕ್ಷಾ ಪಾತ್ರೆ ಹಿಡಿದು ರಾಜ್ಯದಲ್ಲಿ ರೈತರಿಗೆ ಬಂದಿರುವ ಬರವನ್ನು ಸಾಂಕೇತಿಕವಾಗಿ ಬಿಂಬಿಸಲಿದ್ದಾರೆ.
2,700 ವಿದೇಶೀ ಉತ್ಪನ್ನಗಳು ದೇಶದೊಳಗೆ ಬರಲು ಸರಕಾರ ದಾರಿ ಮಾಡಿಕೊಟ್ಟಿರುವುದರಿಂದ ಇಲ್ಲಿನ ಕೃಷಿ ಉತ್ಪನ್ನ ವ್ಯಾಪಾರ ವಲಯ ಅಸ್ತವ್ಯಸ್ತವಾಗಿದೆ ಎಂದು ವಿಷಾದಿಸಿದ ಪುಟ್ಟಣ್ಣಯ್ಯ ಅವರು ಕೃಷಿ , ಕೈಗಾರಿಕಾ ಕ್ಷೇತ್ರವನ್ನು ನಾಶ ಮಾಡಲು ಹೊರಟಿರುವ ಸರಕಾರವನ್ನು ಬಡಿದೆಚ್ಚರಿಸಲು ಈ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ರೈತರ ಆಗ್ರಹಗಳನ್ನು ಪಟ್ಟಿ ಮಾಡುವುದಾದರೆ -
- ಮುಕ್ತ ಮಾರುಕಟ್ಟೆಯಲ್ಲಿ ಬಿಯರ್ ಮಾರಾಟ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು.
- ನುಸಿರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ನೀರಾ ಇಳಿಸಲು ಅನುಮತಿ ನೀಡಬೇಕು.
- ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗೆಳು ಕಬ್ಬು ಬೆಳೆಗಾರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ತಕ್ಷಣವೇ ನೀಡಬೇಕು.
- ಜಿಲ್ಲೆಯಾದ್ಯಂತ ಪ್ರಸ್ತುತ ಬೆಳೆದ ಕಬ್ಬು ನೀರಿಲ್ಲದೆ ಒಣಗುತ್ತಿದೆ. ಇದಕ್ಕಾಗಿ ಸರಕಾರ ನೀರು ನಿರ್ವಹಣೆಯ ನಿಯಂತ್ರಣ ಪಡೆ ರಚಿಸಬೇಕು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications