ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯಲ್ಲಿ ಅಗ್ನಿ ದುರಂತ
ಬೆಂಗಳೂರು : ರಾಜ್ಯ ಸರಕಾರಿ ಸ್ವಾಮ್ಯದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂ.ಪಿ.ಎಂ.) ಯಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕಾಗದ ತಯಾರಿಕೆಗೆ ಬಳಸುವ ಕೊಟ್ಯಂತರ ರುಪಾಯಿ ಮೌಲ್ಯದ ಕಬ್ಬಿನ ಹಿಪ್ಪೆ ಸುಟ್ಟು ಭಸ್ಮವಾಗಿದೆ.
ಸಂಜೆಯ ವೇಳೆಗೆ ಬೆಂಗಳೂರು ಪೊಲೀಸ್ ಕೇಂದ್ರ ಕಚೇರಿಯನ್ನು ತಲುಪಿರುವ ವರದಿಗಳ ರೀತ್ಯ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಅವಿರತ ಹೋರಾಟ ನಡೆಸಿವೆ. ಹತ್ತಿರದ ಶಿವಮೊಗ್ಗ ಹಾಗೂ ಇತರೆಡೆಗಳಿಂದ ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಕಾರ್ಖಾನೆಗೆ ಧಾವಿಸಿದ್ದಾರೆ.
ಪ್ರಾಥಮಿಕ ವರದಿಗಳ ರೀತ್ಯ ಶುಕ್ರವಾರ ಮಧ್ಯಾಹ್ನ 2.30ರ ಸಮಯದಲ್ಲಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬೆಂಕಿ ಆಕಸ್ಮಿಕದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಗಳು ಬಂದಿಲ್ಲ.
ಸಂಜೆಯ ವರೆಗೆ ಬಂದಿರುವ ವರ್ತಮಾನಗಳ ರೀತ್ಯ ಕಾರ್ಖಾನೆಯಲ್ಲಿ ಉಂಟಾದ ಬೆಂಕಿ ಅನಾಹುತದಲ್ಲಿ ಸುಮಾರು 6.5 ಕೋಟಿ ರುಪಾಯಿಗಳಷ್ಟು ನಷ್ಟ ಸಂಭವಿಸಿದೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಖಾನೆಯಲ್ಲಿ ಸಂಭವಿಸದ ಬೆಂಕಿ ಆಕಸ್ಮಿಕದ ಸುದ್ದಿ ಶುಕ್ರವಾರ ವಿಧಾನಸಭೆಯಲ್ಲೂ ಮಾರ್ದನಿಸಿತು. ಈ ಸಂಬಂಧ ಮಾಹಿತಿ ತರಿಸಿಕೊಂಡು ಶನಿವಾರ ವಿವರಣೆ ನೀಡುವುದಾಗಿ ಸರಕಾರ ಪ್ರಕಟಿಸಿತು. ಕೆಲವೇ ದಿನಗಳ ಹಿಂದೆ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯ ಗೋದಾಮಿಗೆ ಬೆಂಕಿ ಬಿದ್ದು, ಕೋಟ್ಯಂತರ ರುಪಾಯಿ ನಷ್ಟ ಸಂಭವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications