ಹೇಡನ್, ವಾರ್ಕ್ ವಾ, ಮೆಕ್ಗ್ರಾತ್ಶನಿವಾರ ಆಡುತ್ತಿಲ್ಲ
ಇಂದೋರ್ : ಮೊನ್ನೆ ಮುಗಿದ ಟೆಸ್ಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿ ಸೀಮಿತ ಓವರ್ ಪಂದ್ಯಗಳಲ್ಲೂ ಸ್ಥಾನ ಗಿಟ್ಟಿಸಿದ ಮ್ಯಾಥ್ಯೂ ಹೇಡನ್, ಭರವಸೆಯ ವೇಗಿ ಮೆಕ್ಗ್ರಾತ್ ಹಾಗೂ ಪುಣೆ ಪಂದ್ಯದಲ್ಲಿ ಉತ್ತಮ ಶತಕ ಬಾರಿಸಿದ್ದ ಮಾರ್ಕ್ ವಾ ಇಂದೋರ್ನಲ್ಲಿ ಶನಿವಾರ ನಡೆಯಲಿರುವ ಭಾರತದ ವಿರುದ್ಧದ ಒನ್ಡೇ ಪಂದ್ಯದಲ್ಲಿ ಆಡುತ್ತಿಲ್ಲ. ಶುಕ್ರವಾರ ಆಸ್ಟ್ರೇಲಿಯಾ ತಂಡ ಮಾಧ್ಯಮಗಳಿಗೆ ಈ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.
ಫಾರ್ಮ್ ಕಂಡುಕೊಂಡಿರುವ ಮಾರ್ಕ್ ವಾ ಪುಣೆ ಪಂದ್ಯದಲ್ಲಿ ಗಾಯಗೊಂಡಿದ್ದಾರೆ ಕೂಡ. ಹೇಡನ್ ಹಾಗೂ ಮೆಕ್ಗ್ರಾತ್ ಅವರು ಸಮರ್ಥರಾಗಿದ್ದರೂ, ಸರದಿ ಪದ್ಧತಿಯ ಮೇರೆಗೆ ಬೇರೆ ಆಟಗಾರರಿಗೆ ಅವಕಾಶ ನೀಡಿ, ಇವರಿಗೆ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಆಸ್ಟ್ರೇಲಿಯಾ ತಂಡದ ಉಪ ನಾಯಕ ಗಿಲ್ಕ್ರಿಸ್ಟ್ ಈ ವಿಷಯ ತಿಳಿಸಿದರು. ಶನಿವಾರದ ಪಂದ್ಯದಲ್ಲಿ ತಾವೇ ಆರಂಭಿಕ ಆಟಗಾರರಾಗಿ ಆಡುವುದಾಗಿ ಅವರು ಹೇಳಿದರು.
ಈ ಮೂವರು ದಿಗ್ಗಜರ ಅನುಪಸ್ಥಿತಿಯಲ್ಲಿ ಭಾರತಕ್ಕೆ ಸರಣಿಯಲ್ಲಿ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಉತ್ತಮ ಅವಕಾಶವಿದೆ. ಮೆಕ್ಗ್ರಾತ್ ಚೆಂಡುಗಳನ್ನು ಕಳೆದೆರಡೂ ಪಂದ್ಯಗಳಿಂದ ಚಚ್ಚಿರುವ ತೆಂಡೂಲ್ಕರ್ಗೆ ಈ ಸುದ್ದಿಯಿಂದ ನಿರಾಸೆಯಾಗಿದ್ದರೂ ಅಚ್ಚರಿಯಿಲ್ಲ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications