ಮಹಿಳಾ ಮೀಸಲಾತಿ ಮಸೂದೆಗೆನೂರೆಂಟು ತಡೆ - ಮೋಟಮ್ಮ
ಮಂಗಳೂರು : ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಮಂಡನೆಯಾಗುತ್ತಿದೆಯಾದರೂ ಅದು ಅಂಗೀಕಾರವಾಗದಂತೆ ಸಂಚು ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮೋಟಮ್ಮ ವಿಷಾದಿಸಿದ್ದಾರೆ.
ಕೋಣಾಜೆಯ ಮಂಗಳಗಂಗೋತ್ರಿಯಲ್ಲಿ ಸಮಾಜ ಶಾಸ್ತ್ರ ವಿಭಾಗವು ರಾಜ್ಯ ಮಹಿಳಾ ಅಭಿವೃದ್ಧಿ ವಿಭಾಗದೊಂದಿಗೆ ಹಮ್ಮಿಕೊಂಡಿದ್ದ ಸರಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಮಹಿಳಾ ಸಬಲೀಕರಣ ಕುರಿತ ಮೂರು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಹೆಣ್ಣು ಮಕ್ಕಳಿಗೆ ದಕ್ಷತೆಯ ರಾಜಕಾರಣ ಸಾಧ್ಯವಿದೆ ಎನ್ನುವುದಕ್ಕೆ ಹಿಂದಿನ ವೀರ ರಾಣಿಯರೇ ಉದಾಹಣೆ. ಈ ನಿಟ್ಟಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರವಾಗುವಂತೆ ಪ್ರಜ್ಞಾವಂತರು ಹೋರಾಡಬೇಕು ಎಂದು ಸಚಿವೆ ಕರೆ ನೀಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಅವರು, ಮಹಿಳೆಯರ ಅಭಿವೃದ್ಧಿಯತ್ತ ಗಮನ ಹರಿಸದೇ ಇದ್ದಲ್ಲಿ ದೇಶ ಅಭಿವೃದ್ಧಿಯಾಗದು ಎಂದರು. ಕಾರ್ಯಕ್ರಮದಲ್ಲಿ ವಿವಿಯ ಉಪಕುಲಪತಿ ಪ್ರೊ. ಎಸ್. ಗೋಪಾಲ್, ಸಮಾಜಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ. ಮೊಹಮ್ಮದ್, ರಿಜಿಸ್ಟ್ರಾರ್ ಡಾ. ಕೆ. ಜನಾರ್ದನ್ ಹಾಜರಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications