ರಾಜ್ಯದ ಹಲವೆಡೆ ತಂಪೆರೆದ ಮಳೆ
ಬೆಂಗಳೂರು : ಗುರುವಾರ ಬೆಂಗಳೂರಿನ ಒಂದೆರಡು ಬಡಾವಣೆಗಳಿಗೆ ತಂಪೆರೆದ ಮಳೆ ರಾಜ್ಯದ ಕೆಲವು ಭಾಗಗಳ ಬಿಸಿಲ ಬೇಗೆಯನ್ನೂ ಶಮನ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಚದುರಿದಂತೆ ಮಳೆ ಆಗಿದೆ.
ಚಿಂತಾಮಣಿಯಲ್ಲಿ 4 ಸೆಂಟಿ ಮೀಟರ್, ಮೂರ್ನಾಡು ಹಾಗೂ ಬಾಗೇಪಲ್ಲಿಯಲ್ಲಿ ತಲಾ 2 ಸೆಂಟಿ ಮೀಟರ್ ಮಳೆ ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಮಾತ್ರ ಒಣಹವೆ ಮುಂದುವರಿದಿದೆ. ಗರಿಷ್ಠ ಉಷ್ಣಾಂಶ ರಾಜ್ಯದಲ್ಲಿ ಅಲ್ಪ ಬದಲಾವಣೆ ಕಂಡಿದೆ. ಕೆಲವು ಕಡೆ ಗರಿಷ್ಠ ತಾಪಮಾನ ಏರಿದ್ದರೆ, ಉತ್ತರ ಒಳನಾಡು ಹಾಗೂ ಕರಾವಳಿಯ ಹಲವೆಡೆ ಸಾಮಾನ್ಯ ಮಟ್ಟದಲ್ಲಿತ್ತು.
ಕನಿಷ್ಠ ತಾಪಮಾನ ಕೂಡ ಕೆಲವು ಕಡೆ ಹೆಚ್ಚಿದ್ದು, ಉಳಿದಂತೆ ಸಾಮಾನ್ಯಮಟ್ಟದಲ್ಲಿ ಇತ್ತು. ರಾಜ್ಯದ ಅತಿ ಹೆಚ್ಚು ತಾಪಮಾನ 41.8 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲೂ, ಅತಿ ಕಡಿಮೆ ಉಷ್ಣಾಂಶ 16.9 ಡಿಗ್ರಿ ಸೆಲ್ಸಿಯಸ್ ಬೆಳಗಾವಿಯಲ್ಲೂ ದಾಖಲಾಗಿದೆ.
ಮುಂದಿನ 48 ಗಂಟೆಗಳ ಮುನ್ಸೂಚನೆಯ ರೀತ್ಯ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಂಭವ ಇದೆ. ಉಳಿದಂತೆ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಮೋಡ ಕವಿದಿದ್ದು, ಸಂಜೆ ಅಥವಾ ರಾತ್ರಿ ಒಂದೆರಡು ವರಸೆ ಮಳೆ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ಉಷ್ಣಾಂಶ 32 ಡಿಗ್ರಿ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಲುಪುವ ಸೂಚನೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications