ಮಹಾವೀರ- 2600 : ಕೇಂದ್ರದಿಂದವರ್ಷವಿಡೀ ಕಾರ್ಯಕ್ರಮ
ನವದೆಹಲಿ : ಭಗವಾನ್ ಮಹಾವೀರ ನಿರ್ವಾಣದ 2,600ನೇ ವಾರ್ಷಿಕೋತ್ಸವವನ್ನು ಈ ವರ್ಷವಿಡೀ ಆಚರಿಸಲು ಕೇಂದ್ರ ಸಂಸ್ಕೃತಿ ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಸಚಿವರು, ವರ್ಷಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಒಂದು ಕೋಟಿ ರೂಪಾಯಿ ನಿಧಿಯನ್ನು ತೆಗೆದಿರಿಸಿದೆ. ಏಪ್ರಿಲ್ ಆರರಿಂದ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಆರಂಭವಾಗುತ್ತವೆ. ಅಂದು ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಮಹಾವೀರ ನಿರ್ವಾಣ ಉತ್ಸವದ ವಾರ್ಷಿಕ ಸರಣಿ ಕಾರ್ಯಕ್ರಮವನ್ನು ಪ್ರಧಾನಿ ವಾಜಪೇಯಿ ಉದ್ಘಾಟಿಸಲಿದ್ದಾರೆ. ವಾರ್ಷಿಕೋತ್ಸವದ ರಾಷ್ಟ್ರೀಯ ಸಮಿತಿಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಇರುತ್ತಾರೆ ಎಂದು ಸಚಿವರು ಹೇಳಿದರು.
ಪ್ರತಿ ವರ್ಷ ಏಪ್ರಿಲ್ ಆರನ್ನು ಅಹಿಂಸಾ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ರಾಷ್ಟ್ರಾದ್ಯಂತ ಪ್ರಾಣಿ ವಧೆಯನ್ನು ನಿಷೇಧಿಸಲಾಗುವುದು. ಜೈೖನ ಸಿದ್ಧಾಂತವನ್ನು ಪ್ರತಿನಿಧಿಸುವ ವಿಶ್ವ ಮಟ್ಟದ ವಸ್ತು ಪ್ರದರ್ಶನವನ್ನು ಬೆಂಗಳೂರು, ದೆಹಲಿ, ಹೈದರಾಬಾದ್, ಚೈನ್ನೈ, ಮತ್ತು ಕಲ್ಕತ್ತಾದಲ್ಲಿ ಆಯೋಜಿಸಲಾಗುವುದು ಎಂದು ಅನಂತ್ ವಿವರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಮಂತ್ರಾಲಯದ ನೆರವಿನೊಂದಿಗೆ ಜಿಲ್ಲೆಗೊಂದು ಮಾದರಿ ಹಳ್ಳಿಯನ್ನು ರಚಿಸಲಾಗುವುದು. ತೀರ್ಥಂಕರ ಮಹಾವೀರನ ನಿರ್ವಾಣ ವರ್ಷದ ಆಚರಣೆಗೆ ರಾಜ್ಯ ಸಮಿತಿಗಳನ್ನು ರಚಿಸಿಕೊಳ್ಳುವಂತೆ ಪ್ರತಿ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ ಎಂದು ಅನಂತ್ ಕುಮಾರ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications