ಕುದುರಿಕೊಂಡ ಆರೋಗ್ಯ, ಮನೆಗೆಮರಳಿದ ರಾಷ್ಟ್ರಪತಿ
ನವದೆಹಲಿ : ಪ್ರತಿಷ್ಠಿತ ಗಂಗಾರಾಂ ಆಸ್ಪತ್ರೆಯಲ್ಲಿ ಮೂತ್ರಕೋಶದ ಕಲ್ಲಿನ ನಿವಾರಣೆಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ ರಾಷ್ಟ್ರಪತಿ ಕೆ.ಆರ್. ನಾರಾಯಣ್ ಅವರನ್ನು ಮೂರು ದಿನಗಳ ವೈದ್ಯಕೀಯ ಉಪಚಾರಗಳ ನಂತರ ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಬುಧವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ನಾರಾಯಣ್ ಅವರಿಗೆ ಡಾ. ಪ್ರದೀಪ್ ಚೌಬೆ ನೇತೃತ್ವದ ವೈದ್ಯರ ತಂಡ ಗುರುವಾರ ಬೆಳಿಗ್ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿತ್ತು . ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದ ರಾಷ್ಟ್ರಪತಿಗಳು ಶುಕ್ರವಾರ ಸ್ವಲ್ಪ ಮಟ್ಟಿಗೆ ವಾಕ್ ಮಾಡುವಷ್ಟು ಹಾಗೂ ಲಘು ಉಪಾಹಾರ ಸೇವಿಸುವಷ್ಟು ಚೇತರಿಸಿಕೊಂಡಿದ್ದರು. ಉಪರಾಷ್ಟ್ರಪತಿ ಕೃಷ್ಣಕಾಂತ್ ಹಾಗೂ ಪ್ರಧಾನಿ ವಾಜಪೇಯಿ ಅವರು ಪುಷ್ಪಗುಚ್ಛ ಕಳುಹಿಸಿ ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದರು.
ಪ್ರಸ್ತುತ ನಾರಾಯಣ್ ಅವರು ಸಂಪೂರ್ಣ ಚೇತರಿಸಿಕೊಂಡಿರುವುದರಿಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮೈಕ್ರೋ ಲ್ಯಾಫ್ರೋಸ್ಕೋಪಿಕ್ ವಿಧಾನದ ಮೂಲಕ ಅವರ ಮೂತ್ರಕೋಶದಲ್ಲಿನ ಕಲ್ಲುಗಳನ್ನು ಹೊರ ತೆಗೆಯಲಾಗಿದೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications