ಕನಕಪುರದಲ್ಲಿ ಉಲ್ಬಣಗೊಳ್ಳುತ್ತಿರುವ ಕರುಳುಬೇನೆಗೆ 3 ಬಲಿ
ಕನಕಪುರ : ಕಳೆದ ಹದಿನೈದು ದಿನಗಳಿಂದ ಕಾಣಿಸಿಕೊಂಡಿರುವ ಕರುಳು ಬೇನೆಗೆ ಮೂರು ಮಂದಿ ಬಲಿಯಾಗಿದ್ದು, ಸುಮಾರು 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಮಳೆಗಾಳು ಗ್ರಾಮದ ನಿವಾಸಿ ಕೆಂಪಮ್ಮ (26), ಬರಡನಹಳ್ಳಿಯ ಚೆಲುವೇ ಗೌಡ (60) ಹಾಗೂ ಕೋಡಿ ಹಳ್ಳಿಯ ರಾಚಮ್ಮ (50) ಕರುಳಬೇನೆಗೆ ಬಲಿಯಾಗಿದ್ದಾರೆ. ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಕರುಳು ಬೇನೆಯಿಂದ ಹಲವರು ನರಳುತ್ತಿದ್ದರೆ, ಇನ್ನು ಕೆಲವರು ಹಾರೋಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಇತರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರುಳುಬೇನೆಗೆ ತುತ್ತಾದವರಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿರುವುದು ಕಂಡುಬಂದಿದೆ.
ಏಪ್ರಿಲ್ 15ರವೆರೆಗೆ ಸಾಮೂಹಿಕ ಸಮಾರಂಭಗಳಿಲ್ಲ
ಕರುಳುಬೇನೆಯ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ನಡೆಯಬೇಕಿರುವ ಎಲ್ಲ ಸಂತೆ, ಜಾತ್ರೆ, ಊರ ಹಬ್ಬಗಳನ್ನು ಈ ತಿಂಗಳ 15ರವರೆಗೆ ಮುಂದೂಡಲಾಗಿದೆ. ಹೋಟೆಲ್, ಸರಾಯಿ ಅಂಗಡಿಗಳನ್ನು ಒಂದು ವಾರದವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ತಾಲ್ಲೂಕಿನ ವಿರುಪಸಂದ್ರದಲ್ಲಿ ಯುಗಾದಿಯ ಮರುದಿನ ಕಾಣಿಸಿಕೊಂಡ ಕರುಳಬೇನೆಗೆ ಕಲುಷಿತ ನೀರು ಮತ್ತು ಆಹಾರ ಸೇವನೆಯೇ ಕಾರಣ ಎಂದು ತಿಳಿದು ಬಂದಿದೆ. ಶನಿದೇವರ ಜಾತ್ರೆಯಲ್ಲಿ ಕಲಬೆರಕೆ ಆಹಾರ ಸೇವಿಸಿದವರನ್ನು ಮರುದಿನವೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಲ್ಲಿ ಆರಂಭವಾದ ಕರುಳುಬೇನೆ ತಾಲೂಕಿನಾದ್ಯಂತ ಹರಡಿದೆ.
ಕರುಳುಬೇನೆ ನಿಯಂತ್ರಣಕ್ಕೆ ಬರುತ್ತಿರುವಂತೆಯೇ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ಗ್ರಾಮದ ಕಿರುನೀರು ಸರಬರಾಜು ಕೊಳವೆಗಳೂ ದುಸ್ಥಿತಿಯಲ್ಲಿವೆ. ಇದರಿಂದಾಗಿ ಗ್ರಾಮಸ್ಥರು ಇನ್ನಷ್ಟು ಆತಂಕಪಡುವಂತಾಗಿದೆ.
(ಇನ್ಫೋ ವಾರ್ತೆ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications