ಕರ್ನಾಟಕ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷರ ಕೊಲೆ ಯತ್ನ
ಮಂಗಳೂರು : ಕರ್ನಾಟಕ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಹಾಗೂ ಬ್ಯಾಂಕ್ನ ಕೊಡಿಯಾಲ ಬೈಲ್ ಶಾಖೆ ವಿಶೇಷ ಸಹಾಯಕ ಯು. ರಾಮಕೃಷ್ಣ ಅವರನ್ನು ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿಯೇ ಗುಂಡು ಹಾರಿಸಿ ಕೊಲ್ಲುವ ಪ್ರಯತ್ನವೊಂದು ಸೋಮವಾರ ಬೆಳಗ್ಗೆ ನಡೆದಿದೆ.
ರಾಮಕೃಷ್ಣ ಸೋಮವಾರ ಕರ್ತವ್ಯ ನಿರತರಾಗಿದ್ದಾಗ, ಬ್ಯಾಂಕ್ ಶಾಖೆಯ ಭದ್ರಾತಾ ಸಿಬ್ಬಂದಿ ಸುಧಾಕರ ತನ್ನ ರೈಫಲ್ನಿಂದ ಗುಂಡು ಹಾರಿಸಿದ. ಗುಂಡು ರಾಮಕೃಷ್ಣರ ಕಿಬ್ಬೊಟ್ಟೆಗೆ ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗುಂಡು ಹಾರಿಸಿದ ಆರೋಪಿ ಸುಧಾಕರ ಪೊಲೀಸರಿಗೆ ಶರಣಾಗಿದ್ದಾನೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದ್ದರು. ಬ್ಯಾಂಕ್ನಲ್ಲಿ ಗುಂಡು ಹಾರಿದ್ದರಿಂದ ಬ್ಯಾಂಕ್ ಸಿಬ್ಬಂದಿ ದಿಗ್ಭ್ರಮೆಗೊಂಡ ಕಾರಣ ಸೋಮವಾರ ಕೋಡಿಯಾಲ ಬೈಲ್ ಶಾಖೆಯ ವ್ಯವಹಾರ ಸ್ಥಗಿತಗೊಂಡಿತ್ತು. ಮಂಗಳೂರಿನಲ್ಲೂ ಆತಂಕ ಮನೆ ಮಾಡಿತ್ತು.
ಈ ಹತ್ಯೆ ಪ್ರಯತ್ನಕ್ಕೆ ಕಾರಣ ಏನು ಎಂದು ತಿಳಿದುಬಂದಿಲ್ಲ. ರಾಮಕೃಷ್ಣ ಮಂಗಳೂರು ಶಾಖೆ ಸಿಬ್ಬಂದಿಯಾಗಿದ್ದು, ನೌಕರರ ಸಂಘದ ಪದಾಧಿಕಾರಿಯಾಗಿ ಉಳಿಯಬೇಕು ಎಂಬ ಕಾರಣಕ್ಕಾಗಿ ಅಧಿಕಾರಿ ಹುದ್ದೆಗೆ ದೊರೆತಿದ್ದ ಬಡ್ತಿಯನ್ನು ನಿರಾಕರಿಸಿದ್ದರು ಎಂದು ಬ್ಯಾಂಕ್ ನೌಕರ ಸಂಘದ ಮೂಲಗಳು ತಿಳಿಸಿವೆ.
(ಮಂಗಳೂರು ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications