ಏಪ್ರಿಲ್ 4ರಂದು ರಾಜ್ಯದಲ್ಲಿ ನೀವು ಜವಳಿ ಖರೀದಿಸುವಂತಿಲ್ಲ!
ಬೆಂಗಳೂರು : ರಾಜ್ಯ ಬಜೆಟ್ನಲ್ಲಿ ಪ್ರವೇಶ ತೆರಿಗೆಯನ್ನು ಶೇಕಡಾ ಒಂದರಿಂದ ಎರಡಕ್ಕೆ ಏರಿಸಿರುವುದನ್ನು ವಿರೋಧಿಸಿ, ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ದೊಡ್ಡ ಮತ್ತು ಮಧ್ಯಮ ಜವಳಿ ಉದ್ಯಮಗಳು ಬುಧವಾರ ಬಂದ್ ಆಚರಿಸಲು ನಿರ್ಧರಿಸಿವೆ.
ಬೆಂಗಳೂರಿನ ರಖಂ ಜವಳಿ ಮಾರಾಟಗಾರರ ಸಂಘದ ಅಧ್ಯಕ್ಷ ಮಾನಂಡಿ ಎನ್. ಸುರೇಶ್ ಈ ವಿಷಯವನ್ನು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ರಾಜ್ಯದ ಜವಳಿ ಉದ್ಯಮ ಗಂಭೀರ ಸ್ಥಿತಿಯಲ್ಲಿರುವುದರಿಂದ ಸರಕಾರ ಪ್ರವೇಶ ತೆರಿಗೆಯನ್ನು ತೆಗೆದು ಹಾಕಬಹುದು ಎಂಬ ನಿರೀಕ್ಷೆಯಲ್ಲಿ ಜವಳಿ ಉದ್ಯಮವಿತ್ತು . ಆದರೆ ಸರಕಾರ ನಿರೀಕ್ಷೆಗೆ ಪ್ರತಿಕೂಲವಾಗಿ ವರ್ತಿಸಿದೆ ಎಂದರು.
ನೆರೆ ರಾಜ್ಯಗಳಲ್ಲಿ ಜವಳಿ ಉದ್ಯಮಕ್ಕೆ ಪ್ರವೇಶ ತೆರಿಗೆ ಇಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ಈಗಾಗಲೇ ಇದ್ದ ಪ್ರವೇಶ ತೆರಿಗೆಯನ್ನು ದುಪ್ಪಟ್ಟುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಬುಧವಾರ ರಾಜ್ಯಾದ್ಯಂತ ಬಂದ್ ಆಚರಿಸಲಾಗುವುದು ಅಲ್ಲದೆ, ಮುಖ್ಯಮಂತ್ರಿ ಎಸ್. ಎಂ. ಕೃಷ್ಣರಿಗೆ ಸಂಘವು ಮನವಿ ಪತ್ರವನ್ನು ಸಲ್ಲಿಸುವುದು ಎಂದು ಸುರೇಶ್ ಹೇಳಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications