ಅನಧಿಕೃತ ದೇಗುಲ, ಚರ್ಚ್, ಮಸೀದಿ ನೆಲಸಮ:ಕೃಷ್ಣ ಎಚ್ಚರಿಕೆ
ಬೆಂಗಳೂರು : ‘ನಾನು ಇಂದು ಸಮಾರಂಭಕ್ಕೆ ಬರುವಾಗ ದೇವರ ಹೆಸರಿನಲ್ಲಿ ಕೆಲವು ಭೂ ಮಾಲಿಕರು ರಸ್ತೆಯನ್ನು ಒತ್ತುವರಿ ಮಾಡಿರುವುದನ್ನು ಗಮನಿಸಿದೆ. ದೇವರ ಹೆಸರಿನಲ್ಲಿ ಸರಕಾರಿ ಭೂಮಿ ಒತ್ತುವರಿ ಮಾಡಲು ನಾನು ಅವಕಾಶ ನೀಡುವುದಿಲ್ಲ. ಬೆಂಗಳೂರೂ ಸೇರಿದಂತೆ ರಾಜ್ಯಾದ್ಯಂತ ಸರ್ಕಾರಿ ಭೂಮಿಯಲ್ಲಿ ಅನಧಿಕೃತವಾಗಿ ತಲೆ ಎತ್ತುವ ದೇವಾಲಯ, ಚರ್ಚ್ ಹಾಗೂ ಮಸೀದಿಗಳನ್ನು ನೆಲಸಮ ಮಾಡಲಾಗುವುದು’ ಹೀಗೆಂದವರು ಮತ್ತಾರೂ ಅಲ್ಲ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಅಂಜನಾಪುರ ಗಡಿಯ ಬಳಿ ನಿರ್ಮಿಸಲುದ್ದೇಶಿಸಿರುವ ಅಂಜನಾಪುರ ಹೊಸ ಬಡಾವಣೆಗೆ ಶಿಲಾನ್ಯಾಸ ಮಾಡಿ ಅವರು ಮಾತನಾಡುತ್ತಿದ್ದರು. ದೇವರು ನನಗೆ ಶಿಕ್ಷೆ ಕೊಟ್ಟರೂ ಪರವಾಗಿಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮಂದಿರ, ಮಸೀದಿ, ಚರ್ಚ್‌ಗಳು ಹುಟ್ಟಿಕೊಳ್ಳಲು ಸರಕಾರ ಅವಕಾಶ ನೀಡದು, ನೆಲಸಮ ಮಾಡಲೂ ಹಿಂಜರಿಯದು, ಅಂತಹ ಸಾಹಸಕ್ಕೆ ಕೈಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಸ್ಥಳಗಳಲ್ಲಿ ಗುಡಿ, ಗೋಪುರ, ಚರ್ಚ್, ಮಸೀದಿ ಯಾವುದೇ ತಲೆ ಎತ್ತಲು ಅವಕಾಶ ನೀಡಬಾರದು. ಇಂತಹ ಅತಿಕ್ರಮಣವನ್ನು ಆರಂಭದ ಹಂತದಲ್ಲೇ ತಡೆಯಬೇಕು. ಈ ಸಂಬಂಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಿ ಎಂದೂ ಪಾಲಿಕೆ, ಪುರಸಭೆ, ಪಂಚಾಯ್ತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ನಗರದ ಅಭಿವೃದ್ಧಿಗಾಗಿ ರಾಜಧಾನಿ ನಿಧಿ ಸ್ಥಾಪಿಸಲಾಗಿದೆ. ಇದಕ್ಕೆ ಒದಗಿಸಿರುವ ಹಣದ ಪ್ರಮಾಣ ಹೆಚ್ಚಿಸಲಾಗುವುದು, ಮೇಲು ಸೇತುವೆ, ರಸ್ತೆ ಸುಧಾರಣೆ ಮೊದಲಾದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು. ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಸರಿಯೇ ಅವರನ್ನು ಎತ್ತಂಗಡಿ ಮಾಡಿಸಲಾಗುವುದು ಎಂದರು.
ಹೊಸ ಯೋಜನೆ : 15 ವರ್ಷಗಳ ಬಳಿಕ ಮೊದಲ ಬಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸುತ್ತಿರುವ ಅಂಜನಾಪುರ ಬಡಾವಣೆ ಎಲ್ಲ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಬಡಾವಣೆಯಾಗಿ, ಮಧ್ಯಮ ಹಾಗೂ ಕೆಳವರ್ಗದ ಜನರ ಸೂರಿನ ಕನಸನ್ನು ನನಸಾಗಿಸಲಿದೆ ಎಂದರು.
ಸಚಿವರಾದ ಎ. ಕೃಷ್ಣಪ್ಪ, ಶಾಸಕ ಆರ್. ಅಶೋಕ್, ವಿಧಾನ ಪರಿಷತ್ ಸದಸ್ಯ ನಾರಾಯಣ ರೆಡ್ಡಿ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications