Get Updates
Get notified of breaking news, exclusive insights, and must-see stories!

ಕಾದ ಹೆಂಚಿನ ಮೇಲೆ ನಾಲ್ಕಾರು ಹನಿ

ಬೆಂಗಳೂರು : ಬಿಸಿಲಿನಿಂದ ಕಾದು ಕೆಂಪಗಾಗಿದ್ದ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಚದುರಿದಂತೆ ಮಳೆ ಆಗಿದೆ. ಕರಾವಳಿ ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದೆ. ಮುಂಡರಗಿಯಲ್ಲಿ 5 ಸೆಂಟಿ ಮೀಟರ್‌, ರಾಯಚೂರು, ಹೊಳಲ್ಕೆರೆಗಳಲ್ಲಿ 4, ಲಕ್ಷ್ಮೇಶ್ವರದಲ್ಲಿ 3, ಮಸ್ಕಿಯಲ್ಲಿ 2, ಸೇಡಂ, ಹಾರಂಗಿ, ಗದಗ್‌, ಚಿತ್ರದುರ್ಗದಲ್ಲಿ ತಲಾ 1 ಸೆಂಟಿ ಮೀಟರ್‌ ಮಳೆ ಬಿದ್ದಿದೆ.

ರಾಜ್ಯದ ಅತಿ ಹೆಚ್ಚು ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಗುಲ್ಬರ್ಗಾದಲ್ಲಿ ದಾಖಲಾಗಿದೆ. ಮುನ್ಸೂಚನೆಯ ರೀತ್ಯ ಒಳನಾಡಿನ ಅನೇಕ ಕಡೆಗಳಲ್ಲಿ ಚದುರಿದಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಂಭವ ಇದೆ. ಉಳಿದಂತೆ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ವರಸೆ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+