ಏ.9ರ ಸೋಮವಾರದಿಂದ ದ್ವಿತೀಯ ಪಿ.ಯು.ಸಿ.ಪರೀಕ್ಷೆ ಆರಂಭ
ಬೆಂಗಳೂರು : ಏಪ್ರಿಲ್ 9ರ ಸೋಮವಾರದಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಪ್ರಾರಂಭ. ಸೋಮವಾರದಿಂದ ರಾಜ್ಯಾದ್ಯಂತ ಆರಂಭವಾಗುವ ಈ ಪರೀಕ್ಷೆಯಲ್ಲಿ ಈ ವರ್ಷ 4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಪದವಿಪೂರ್ವ ಶಿಕ್ಷಣ ಮಂಡಳಿಯು ಸಜ್ಜಾಗಿದೆ. ಪರೀಕ್ಷೆ ಅಕ್ರಮ, ಪ್ರಶ್ನೆಪತ್ರಿಕೆ ಬಯಲು ಇತ್ಯಾದಿ ಯಾವುದೇ ಲೋಪ ಜರುಗದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಅಕ್ರಮ ತಡೆಗಟ್ಟಲು ಹಲವು ಕಾಲೇಜುಗಳನ್ನು ಸೇರಿಸಿ, ಒಂದು ಪರೀಕ್ಷಾ ಕೇಂದ್ರ ರಚಿಸುವ ವಿಧಾನವನ್ನು ಮಂಡಳಿ ಜಾರಿಗೆ ತಂದಿದೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಒಟ್ಟು 542 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 250ಕ್ಕೂ ಹೆಚ್ಚು ಕೇಂದ್ರಗಳನ್ನು ಸೂಕ್ಷ್ಮ ಹಾಗೂ 28 ಕೇಂದ್ರಗಳನ್ನು ಅತಿಸೂಕ್ಷ್ಮ ಕೇಂದ್ರ ಎಂದು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಗೊಂದಲ ನಡೆಯದಂತೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಪೊಲೀಸರ ನೆರವನ್ನೂ ಪಡೆಯಲಾಗಿದೆ.
ಜಿಲ್ಲೆಗೊಂದರಂತೆ ಸಂಚಾರಿ ತನಿಖಾ ದಳ ಹಾಗೂ ಕೇಂದ್ರ ಮಟ್ಟದಲ್ಲಿ ವಿಶೇಷ ಜಾಗೃತ ದಳ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಹಾಗೂ ತಾಲೂಕು ಖಜಾನೆಗಳಲ್ಲಿ ಭದ್ರವಾಗಿಡಲಾಗುವುದು. 9ರಿಂದ 27ರವರೆಗೆ ಪರೀಕ್ಷೆ ನಡೆಯಲಿದ್ದು, 28ರಿಂದಲೇ ಬೆಂಗಳೂರು, ಧಾರವಾಡ ಹಾಗೂ ಮೈಸೂರು ನಗರದ 22 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ.
ಬೆಂಗಳೂರಿನಲ್ಲಿ 16, ಮೈಸೂರಿನಲ್ಲಿ 5 ಹಾಗೂ ಧಾರವಾಡದಲ್ಲಿ ಒಂದು ವಿಷಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜರುಗಲಿದೆ. ಈ ವಿಷಯವನ್ನು ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕ ಬಿ.ಎಸ್. ರಾಮಪ್ರಸಾದ್ ತಿಳಿಸಿದ್ದಾರೆ.
ಕಳೆದ ವರ್ಷ ಪಿ.ಯು.ಸಿ. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸಿ ಶಿಕ್ಷಕರು ಹಾಗೂ ಸಿಬ್ಬಂದಿ ತಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸಿದ್ದರು. ಎಸ್ಮಾ ಜಾರಿ, ಶಿಕ್ಷಕರ ಬಂಧನದವರೆಗೂ ಈ ಮುಷ್ಕರ ಮುಟ್ಟಿತ್ತು. ವಿದ್ಯಾರ್ಥಿಗಳ ಪಾಲಕರು ಆತಂಕಕ್ಕೆ ಒಳಗಾಗಿದ್ದರು. ಈ ವರ್ಷವಾದರೂ ಇಂತಹ ಯಾವುದೇ ಹೋರಾಟವನ್ನು ಶಿಕ್ಷಕರು ಕೈಗೊಳ್ಳದೆ, ಪರೀಕ್ಷಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲಿ ಎಂದು ಪಾಲಕರು ಆಶಿಸುತ್ತಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications