ಶನಿವಾರ ಸಂಜೆ ಮಾಜಿ ಉಪಪ್ರಧಾನಿ ದೇವಿಲಾಲ್ ಅವರ ಅಂತ್ಯಕ್ರಿಯೆ
ನವದೆಹಲಿ : ಮಾಜಿ ಉಪ ಪ್ರಧಾನಿ, ಭಾರತದ ಹಿರಿಯ ರಾಜಕಾರಣಿ ದೇವಿಲಾಲ್ ಅವರು ದೀರ್ಘಕಾಲದ ಅಸ್ವಸ್ಥತೆಯ ನಂತರ ಶುಕ್ರವಾರ ಸಂಜೆ ನಿಧನಾರಾದರು.
ದೇವಿಲಾಲ್ ಅವರಿಗೆ 86 ವರ್ಷ ವಯಸ್ಸಾಗಿದ್ದು, ಹೃದಯದ ತೊಂದರೆಯಿಂದ ಬಳಲುತ್ತಿದ್ದರು. ಕಳೆದ ವಾರ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರು, ಹರ್ಯಾಣ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಮತ್ತು ಮಾಜಿ ಸಂಸತ್ ಸದಸ್ಯ ರಂಜಿತ್ ಸಿಂಗ್ ಸೇರಿದಂತೆ ಮೂವರು ಪುತ್ರರನ್ನು ಅಗಲಿದ್ದಾರೆ.
ರೈತ ಹೋರಾಟದ ಮುಂಚೂಣಿಯಲ್ಲಿದ್ದ ದೇವಿಲಾಲ್ ಅವರು ‘ತಾವು’ ಎಂದೇ ಜನಪ್ರಿಯರಾಗಿದ್ದರು. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನಾಲ್ಕು ಗಂಟೆಗೆ ಕಿಸಾನ್ ಘಾಟ್ನಲ್ಲಿ ನಡೆಯಲಿದೆ. ಕೇಂದ್ರ ಸರಕಾರವು ದೇವಿಲಾಲ್ ಅವರ ಗೌರವಾರ್ಥ ಮೂರು ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆ ನಡೆಸಲು ನಿರ್ಧರಿಸಿದೆ.
ರಾಜಕೀಯದ ಹಿರಿಯಜ್ಜ ನಾಗಿದ್ದ ದೇವಿಲಾಲ್ ಅವರ ನಿಧನಕ್ಕೆ ರಾಷ್ಟ್ರಪತಿ ಕೆ.ಆರ್. ನಾರಾಯಣನ್, ಪ್ರಧಾನಿ ವಾಜಪೇಯಿ ಗೃಹ ಸಚಿವ ಎಲ್.ಕೆ. ಅಡ್ವಾಣಿ ಮತ್ತಿತರ ರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
(ಇನ್ಫೋವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications