ನೆಲಮಂಗಲ ಸಾಹಿತ್ಯ ಸಮ್ಮೇಳಾನಧ್ಯಕ್ಷರಾಗಿ ಎಚ್.ಎಸ್. ಗೋಪಾಲ್ರಾವ್
ನೆಲಮಂಗಲ : ನೆಲಮಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ಸಂಶೋಧಕ ಹಾಗೂ ಸಾಹಿತಿ ಡಾ. ಎಚ್. ಎಸ್. ಗೋಪಾಲ್ರಾವ್ ಆಯ್ಕೆಯಾಗಿದ್ದಾರೆ.
ಏಪ್ರಿಲ್ 14ರ ಶನಿವಾರ ಶಿವಗಂಗಾ ಕ್ಷೇತ್ರದ ರೇಣುಕಾ ದೇವಸ್ಥಾನದ ಆವರಣದಲ್ಲಿ ಸಾಹಿತ್ಯ ಸಮ್ಮೇಳ ಮತ್ತು ರೇಣುಕಾ ಜಯಂತಿ ಉತ್ಸವವನ್ನು ಆಯೋಜಿಸಲಾಗಿದೆ. ಇತಿಹಾಸ ಅಕಾಡಮಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಗೋಪಾಲ ರಾವ್ ಅವರು ವೃತ್ತಿಯಲ್ಲಿ ವಿದ್ಯುತ್ ಇಲಾಖೆಯ ಇಂಜಿನಿಯರ್. ಪ್ರವೃತ್ತಿಯಲ್ಲಿ ಶಾಸನ ಶಾಸ್ತ್ರದ ಪಂಡಿತ.
ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಮೊದಲು ಅಧ್ಯಕ್ಷರನ್ನು ಹೊತ್ತ ಸಾಹಿತ್ಯ ರಥದ ಮೆರವಣಿಗೆ ನಡೆಯಲಿದೆ. ಸಮ್ಮೇಳನದಲ್ಲಿ ಭಾವೈಕ್ಯತಾ ಧರ್ಮಗೋಷ್ಠಿ, ಸಾಹಿತ್ಯ ಗೋಷ್ಠಿ ಮತ್ತು ಕವಿಗೋಷ್ಠಿಗಳು ನಡೆಯಲಿವೆ.
ಡಾ. ಎಂ. ಚಿದಾನಂದ ಮೂರ್ತಿ, ಡಾ. ಎಂ.ವಿ. ಶ್ರೀನಿವಾಸ್, ಕವಿ ಸಿದ್ದಗಂಗಯ್ಯ ಕಂಬಾಳು ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಗುವುದು. ಅಲ್ಲದೆ ಎಲ್. ರಮೇಶ್ ಅವರ ಋಣಾನುಬಂಧ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯೆ ವೆಂಕಟಲಕ್ಷ್ಮಿ ಅವರ ಭಾವಬಂಧನ ಕಾದಂಬರಿಗಳನ್ನು ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಬಿ. ಸುರೇಶ್ ಬಿಡುಗಡೆ ಮಾಡುವರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications