ಹರಿಹರ ಕಿರ್ಲೋಸ್ಕರ್ ಕಾರ್ಖಾನೆ ನೌಕರರಸ್ತೆ ತಡೆ : ಲಾಠಿ ಪ್ರಹಾರ
ದಾವಣಗೆರೆ : ಇಲ್ಲಿಗೆ ಸಮೀಪದ ಹರಿಹರದಲ್ಲಿರುವ ಮೈಸೂರು ಕಿರ್ಲೋಸ್ಕರ್ ಕಾರ್ಖಾನೆ ಆರ್ಥಿಕ ಮುಗ್ಗಟ್ಟಿನ ಕಾರಣ ನೀಡಿ ಜ.1ರಿಂದ ಬೀಗಮುದ್ರೆ ಘೋಷಿಸಿದೆ. ಮುಚ್ಚಿರುವ ಕಾರ್ಖಾನೆಯನ್ನು ಮತ್ತೆ ಆರಂಭಿಸಬೇಕು. ಬಾಕಿ ಉಳಿದಿರುವ ಸಂಬಳ ನೀಡಬೇಕು ಎಂದು ಒತ್ತಾಯಿಸಿ ರಸ್ತೆ ತಡೆ ಮಾಡಿದ ಕಾರ್ಮಿಕನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ಈ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದಲ್ಲಿ ನಾಲ್ವರು ಪೊಲೀಸರು ಹಾಗೂ ಮೂವರು ಕಾರ್ಮಿಕರೂ ಸೇರಿದಂತೆ 7 ಜನರು ಗಾಯಗೊಂಡಿದ್ದಾರೆ. ಲಾಠಿ ಪ್ರಹಾರದಲ್ಲಿ ಹಲವು ಕಾರ್ಮಿಕರಿಗೆ ಗಾಯಗಳಾಗಿವೆ. ಪ್ರತಿಭಟನಾ ನಿರತ 20ಕ್ಕೂ ಹೆಚ್ಚು ಕಾರ್ಮಿಕರು ಪೊಲೀಸರ ಅತಿಥಿಗಳಾಗಿದ್ದಾರೆ.
ಕಲ್ಲುತೂರಾಟ, ಪ್ರತಿಭಟನೆ, ಲಾಠಿ ಪ್ರಹಾರದ ನಂತರ ನಗರದಲ್ಲಿ ಪರಿಸ್ಥಿತಿ ಪ್ರಕ್ಷುಬ್ಧವಾಗಿದ್ದು, ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆಯ 144ನೇ ಸೆಕ್ಷನ್ ಅನ್ವಯ 3 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಗಳೂರು - ಹೈದರಾಬಾದ್ ರಸ್ತೆಯಲ್ಲಿ ಕಾರ್ಮಿಕರು ಸಂಚಾರಕ್ಕೆ ಅಡ್ಡಿ ಪಡಿಸಿದ್ದರಿಂದ ಸುಮಾರು ಒಂದೂವರೆ ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಕಾರ್ಮಿಕರ ಮನವೊಲಿಸಲು ಪೊಲೀಸ್ ಅಧಿಕಾರಿಗಳು ಮಾಡಿದ ಪ್ರಯತ್ನ ವಿಫಲವಾಯಿತು. ಸಂಜೆ 4 ಗಂಟೆ ಹೊತ್ತಿನಲ್ಲಿ ಪರಿಸ್ಥಿತಿ ಪ್ರಕೋಪಕ್ಕೆ ತಿರುಗಿ ಹಿಂಸೆಯ ಹಾದಿ ಹಿಡಿದಾಗ, ಲಾಠಿ ಪ್ರಹಾರ ಮಾಡಲಾಯಿತು ಎಂಬುದು ಪೊಲೀಸರ ಹೇಳಿಕೆ.
ಕಾರ್ಖಾನೆ ಮುಚ್ಚಿರುವುದರಿಂದ 2000ಕ್ಕೂ ಹೆಚ್ಚು ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಕಳೆದ 8 ತಿಂಗಳಿನಿಂದಲೂ ವೇತನ ಪಾವತಿ ಆಗಿಲ್ಲ. ಈ ಮಧ್ಯೆ ಬೀಗಮುದ್ರೆ ಘೋಷಿಸಿರುವ ಕಾರ್ಖಾನೆಯಲ್ಲಿ ಆಡಳಿತ ಮಂಡಳಿ ಅಕ್ರಮವಾಗಿ ಉತ್ಪಾದನೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಹೋರಾಟದ ಹಾದಿ ತುಳಿಯುವುದು ಅನಿವಾರ್ಯವಾಯಿತು ಎಂಬುದು ಕಾರ್ಮಿಕ ನಾಯಕರ ಹೇಳಿಕೆ.
(ದಾವಣಗೆರೆ ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications