ಮೈಸೂರಿನ ಮರಸೆ ಬಳಿ ಬಸ್- ಕಾರು ಡಿಕ್ಕಿ : 4 ಸಾವು
ಮೈಸೂರು : ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಎಲ್ಲಾ ನಾಲ್ವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ನಂಜನಗೂಡು- ಮೈಸೂರು ರಸ್ತೆಯ ಮರಸೆ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಕೃಷ್ಣಪ್ಪ (53), ಶಿವಣ್ಣ (30) ಹಾಗೂ ಬೋರಲಿಂಗಯ್ಯ (28) ಮೃತಪಟ್ಟಿರುವ ಮೂವರು. ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ.
ಕೆಎಸ್ಸಾರ್ಟಿಸಿ ಹೈಟೆಕ್ ಬಸ್ಸು ಬೆಂಗಳೂರಿನಿಂದ ಊಟಿಗೆ ಹೋಗುತ್ತಿತ್ತು. ಅಂಬಾಸಿಡರ್ ಕಾರು ನಂಜನಗೂಡಿನಿಂದ ಮೈಸೂರಿನತ್ತ ಬರುತ್ತಿತ್ತು. ಮರಸೆ ಗ್ರಾಮದ ಟೈರ್ ಕಾರ್ಖಾನೆಯ ತಿರುವಿನ ಬಳಿ ಎರಡೂ ವಾಹನಗಳು ಮುಖಾಮುಖಿಯಾದವು. ಈ ಘಟನೆಯಿಂದ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸೇರಿಸಲು ಒಯ್ಯುತ್ತಿದ್ದಾಗ ಹಾದಿಯಲ್ಲಿ ಇನ್ನೊಬ್ಬರು ಅಸು ನೀಗಿದರು. ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಫಣೀಂದರ್ ಸಿಂಗ್ ಈ ವಿಷಯ ತಿಳಿಸಿದರು.
ಬಸ್ಸಿನಲ್ಲಿದ್ದ ಎಲ್ಲರೂ ಕ್ಷೇಮವಾಗಿದ್ದು, ಯಾರಿಗೂ ಯಾವ ಗಾಯಗಳೂ ಆಗಿಲ್ಲ. ಬಸ್ಸಿನ ಚಾಲಕ ಪರಾರಿಯಾಗಿದ್ದು, ಪೊಲೀಸರು ಆತನ ತಲಾಷಿನಲ್ಲಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications