ಕೆಜಿಎಫ್ : ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆಸಚಿವರ ಸಮಿತಿ
ಕೋಲಾರ : ಕೆಜಿಎಫ್ ಪ್ರದೇಶದಲ್ಲಿ ವಿವಿಧ ಕೈಗಾರಿಕೆಗಳು ಹಾಗೂ ಅಭಿವೃದ್ಧಿ ಕಾಮಗಾರಿ ಚಟುವಟಿಕೆಗಳ ಸಾಧ್ಯಾಸಾಧ್ಯತೆಗಳ ಬಗೆಗೆ ಪರಿಶೀಲನೆ ನಡೆಸಲು ಗಣಿ ಸಚಿವ ವಿ. ಮುನಿಯಪ್ಪ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ, ಕೋಲಾರ ಬಂಗಾರ ಗಣಿ ಪ್ರದೇಶಕ್ಕೆ ಸದ್ಯದಲ್ಲೇ ತೆರಳಲಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಮುನಿಯಪ್ಪನವರಿಗೆ ಸೂಚನೆ ನೀಡಿದ್ದಾರೆ. ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೋಟಮ್ಮ ಹಾಗೂ ಸಂಸದ ಕೆ.ಎಚ್. ಮುನಿಯಪ್ಪ ಸಮಿತಿಯಲ್ಲಿರುವ ಇತರ ಸದಸ್ಯರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೋಲಾರದ ಜಿಲ್ಲಾಧಿಕಾರಿ, ಬಿಜಿಎಂಎಲ್ ಅಧಿಕಾರಿಗಳು, ಕೆಪಿಟಿಸಿಎಲ್ ಅಧಿಕಾರಿಗಳು ಹಾಗೂ ನಗರ ಅಭಿವೃದ್ಧಿ ಕಾರ್ಯದರ್ಶಿ ಅವರೊಂದಿಗೆ ಮುಖ್ಯ ಕಾರ್ಯದರ್ಶಿ ತೆರೇಸಾ ಭಟ್ಟಾಚಾರ್ಯ ಅವರು ಶನಿವಾರ ಕೆಜಿಎಫ್ನಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ನೀರು, ವಿದ್ಯುತ್, ಒಳ ಚರಂಡಿ ಸೇರಿದಂತೆ ಎಲ್ಲ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಭಟ್ಟಾಚಾರ್ಯ ಅವರು, ನಗರಾಭಿವೃದ್ಧಿ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications