ಜೂನ್ನಿಂದ 2000 ಶಾಲೆಗಳ ಬಾಗಿಲು ತೆರೆಯುವುದಿಲ್ಲ
ಮೈಸೂರು : ಎಷ್ಟೋ ಹಳ್ಳಿಗಳಲ್ಲಿ ಪ್ರಾಥಮಿಕ ಶಾಲೆಗಳೇ ಇಲ್ಲ ಎನ್ನುವ ದೂರು ಆಗಾಗ ಕೇಳಿ ಬರುವಂಥದ್ದೇ . ಆದರೆ, ಇರುವ ಶಾಲೆಗಳಿಗೇ ವಿದ್ಯಾರ್ಥಿಗಳಿಲ್ಲ ಎನ್ನುತ್ತಿದ್ದಾರೆ ಪ್ರಾಥಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್.
ಅವರು ಗುರ್ತಿಸಿರುವಂತೆ ಅಗತ್ಯ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಲ್ಲ ದ ಹಿರಿಯ ಪ್ರಾಥಮಿಕ ಶಾಲೆಗಳ ಸಂಖ್ಯೆ ರಾಜ್ಯದಲ್ಲಿ 2 ಸಾವಿರ ಮಾತ್ರ. ಆ ಶಾಲೆಗಳನ್ನು ಬರುವ ಶೈಕ್ಷಣಿಕ ವರ್ಷದಿಂದ ಮುಚ್ಚಲಾಗುವುದು ಎಂದು ವಿಶ್ವನಾಥ್ ಹೇಳಿದ್ದಾರೆ.
ಶನಿವಾರ ಮೈಸೂರಿನಲ್ಲಿ ಜರುಗಿದ ಶೈಕ್ಷಣಿಕ ಸಮ್ಮೇಳನವೊಂದರಲ್ಲಿ ಮಾತನಾಡುತ್ತಿದ್ದ ಅವರು, ಅಗತ್ಯವಿದ್ದೆಡೆ ಪ್ರಾಥಮಿಕ ಶಾಲೆಯಲ್ಲೇ 5 ನೇ ತರಗತಿಯನ್ನೂ ಪ್ರಾರಂಭಿಸಲಾಗುವುದು. ಪ್ರಸ್ತುತ ಮುಚ್ಚಲು ಉದ್ದೇಶಿಸಿರುವ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ, ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ಕಲಿಯಲು ಅವಕಾಶ ಮಾಡಿಕೊಡಲಾಗುವುದು. ಶಾಲೆಗಳಿಗೆ ಹೋಗಿ ಬರಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದರು.
ರಾಜ್ಯದಲ್ಲಿ 195 ಶಿಕ್ಷಣ ಕ್ಷೇತ್ರಗಳಿದ್ದು , ಪ್ರತಿ ಕ್ಷೇತ್ರದಲ್ಲಿ 10 ಶಾಲೆಗಳನ್ನು ಮುಚ್ಚಲಾಗುವುದು. ಇದರಿಂದಾಗಿ, ಸರ್ಕಾರದ ಬೊಕ್ಕಸಕ್ಕೆ 36 ಕೋಟಿ ರುಪಾಯಿ ಉಳಿಯುವುದು. ಮುಚ್ಚುವ ಶಾಲೆಗಳಲ್ಲಿನ ಶಿಕ್ಷಕರನ್ನು ಇತರ ಶಾಲೆಗಳಿಗೆ ವರ್ಗಾಯಿಸಲಾಗುವುದು ಎಂದು ಸಚಿವರು ಹೇಳಿದರು.
ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ತಾವು ಕ್ರಾಂತಿಯನ್ನೇನೂ ಉಂಟು ಮಾಡಲು ಪ್ರಯತ್ನಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ ವಿಶ್ವನಾಥ್, ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ನ ಕೆಲವು ನ್ಯೂನತೆಗಳನ್ನು ಸರಿಪಡಿಸುತ್ತಿದ್ದೇನೆ, ಅಷ್ಟೇ ಎಂದರು .
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications