ಕಡುವೈರಿ ದೇವೇಗೌಡರ ಭೆಟ್ಟಿಯಾಗಲು ಒಪ್ಪಿದರಾಮಕೃಷ್ಣ ಹೆಗಡೆ
ಬೆಂಗಳೂರು : ಮತ್ತೊಂದು ಮಹತ್ತರ ರಾಜಕೀಯ ಬೆಳವಣಿಗೆಗೆ ರಾಜ್ಯ ಸಜ್ಜಾಗಿದ್ದು , ಕಡು ರಾಜಕೀಯ ಎದುರಾಳಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಲು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಒಪ್ಪಿದ್ದಾರೆ. ಇದರಿಂದಾಗಿ, ಜಾತ್ಯತೀತ ಹಾಗೂ ಸಂಯುಕ್ತ ಜನತಾದಳಗಳು ಏಕಛತ್ರಿಯಡಿ ಸೇರುವ ಸಾಧ್ಯತೆ ಹೆಚ್ಚಾಗಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಂಯುಕ್ತ ಜನತಾದಳದ ರಾಜ್ಯಾಧ್ಯಕ್ಷ ಸಿ. ಭೈರೇಗೌಡ ಈ ವಿಷಯವನ್ನು ತಿಳಿಸಿದರು. ಇತರ ಇಬ್ಬರು ನಾಯಕರೊಂದಿಗೆ ಸೋಮವಾರ ಹೆಗಡೆ ಅವರನ್ನು ಭೇಟಿ ಮಾಡಿದಾಗ, ಅವರು ದೇವೇಗೌಡರನ್ನು ಭೇಟಿ ಮಾಡುವ ಸೂಚನೆ ನೀಡಿದರು. ಆದರೆ ಮಾತುಕತೆ ನಡೆಯುವ ಸ್ಥಳ ಹಾಗೂ ದಿನಾಂಕದ ಬಗೆಗೆ ಅವರು ಏನನ್ನೂ ಸೂಚಿಸಲಿಲ್ಲ ಎಂದು ಭೈರೇಗೌಡ ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಂಯುಕ್ತ ಜನತಾದಳದೊಂದಿಗೆ ಸಹಕರಿಸುವಂತೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ದೇವೇಗೌಡ ನೀಡಿರುವ ಕರೆಯನ್ನು ಸ್ವಾಗತಿಸಿದ ಭೈರೇಗೌಡ, ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಬಗೆಗೆ ವಿಶ್ವಾಸ ವ್ಯಕ್ತ ಪಡಿಸಿದರು. ಆರು ತಿಂಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಮೊದಲಿಗೆ ವೀರಪ್ಪನ್‌ನಿಂದ ರಾಜ್ ಅಪಹರಣ , ಆನಂತರ ಎಐಸಿಸಿ ಅಧಿವೇಶನ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿದವು ಎಂದು ಆಪಾದಿಸಿದ ಅವರು, ಕಳೆದ ವರ್ಷದ ಬಜೆಟ್ ಪ್ರಸ್ತಾವನೆಗಳ ಫಲಿತಾಂಶದ ಬಗೆಗೆ ಶ್ವೇತಪತ್ರ ಪ್ರಕಟಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications