ಶರಣರಿಗೆ ದ್ರೋಹ ಬಗೆದ ಮಾತೆಮಹಾದೇವಿಗೆ ಬಹಿಷ್ಕಾರ ಹಾಕಿ
ಹುಬ್ಬಳ್ಳಿ : ಶಿವ ಶರಣರ ವಚನಗಳ ನಾಮಾಂಕಿತವನ್ನು ಬದಲಾಯಿಸಿ ಶರಣ ತತ್ವಕ್ಕೆ ಅಪಚಾರವೆಸಗುತ್ತಿರುವ ಬಸವ ಧರ್ಮ ಪೀಠದ ಅಧ್ಯಕ್ಷೆ , ಮಾತೆ ಮಹಾದೇವಿ ಅವರಿಗೆ ವೀರಶೈವ ಧರ್ಮ ಸಾಮಾಜಿಕ ಬಹಿಷ್ಕಾರ ಹಾಕಬೇಕು ಎಂದು ಸಾಹಿತಿಗಳು, ರಾಜಕೀಯ ನಾಯಕರು ಮತ್ತು ಧಾರ್ಮಿಕ ಮುಖಂಡರ ಸಭೆ ನಿರ್ಧರಿಸಿದೆ.
ಧಾರವಾಡದಲ್ಲಿ ಸೋಮವಾರ ನಡೆದ ಸಭೆಯಲ್ಲಿ , ಅಕ್ಕ ಮಹಾದೇವಿಯ ವಚನಗಳ ಅಂಕಿತವನ್ನು ಮಾತೆ ಮಹಾದೇವಿ ಬದಲಾಯಿಸಿರುವುದು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಿದ್ದು , ಇದು ಕನ್ನಡ ಸಾರಸ್ವತ ಲೋಕಕ್ಕೆ ಬಗೆದ ಅಪಚಾರ. ಪ್ರಚಾರಕ್ಕಾಗಿ ವಚನಾಂಕಿತವನ್ನು ಬದಲಾಯಿಸುವ ಮಾತೆ ಮಹಾದೇವಿ ಶಿಕ್ಷೆಗೆ ಅರ್ಹರು ಎಂದು ವಿಧಾನ ಪರಿಷತ್ತಿನ ಸದಸ್ಯ ಬಸವರಾಜ ಹೊರಟ್ಟಿ ಟೀಕಿಸಿದರು.
ಸಾವಿರಾರು ವರ್ಷಗಳಿಂದ ಉಳಿದುಕೊಂಡು ಬಂದ ವಚನಗಳ ಅಂಕಿತವನ್ನು ತಿದ್ದುವ ಅಪರಾಧವನ್ನು ಮಾತೆ ಮಹಾದೇವಿ ಅವರು ಕಳೆದ ಐದಾರು ದಶಕಗಳಿಂದ ಮಾಡುತ್ತಲೇ ಬಂದಿದ್ದಾರೆ ಎಂದು ಸಾಹಿತಿ ಚೆನ್ನವೀರ ಕಣವಿ ಆಪಾದಿಸಿದರು.
ಮಾತೆ ಮಹಾದೇವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಶಾಂತಾದೇವಿ ಮಾಳವಾಡ ಅಭಿಪ್ರಾಯಪಟ್ಟರೆ, ಮಹಾದೇವಿ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಬೇಕು ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.
ಡಾ. ಗುರುಲಿಂಗ ಕಾಪಸೆ, ಡಾ. ಶಾಂತಕ್ಕ ಇಮ್ರಾಪುರ, ಡಾ. ವೀರಣ್ಣ ರಾಜೂರ, ಡಾ. ಚೆನ್ನಕ್ಕ ಪಾವಟೆ, ಹೊಸ ಮಠದ ಚಂದ್ರಶೇಖರ ಸ್ವಾಮೀಜಿ, ಮುರುಘಾ ಮಠದ ಶಿವಯೋಗಿ ಸ್ವಾಮೀಜಿ ಮತ್ತಿತರ ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications