ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಯಾಣಧನ -ವಿಶ್ವನಾಥ್ ಚಿಂತನೆ
ಬೆಂಗಳೂರು : ಶಾಲೆಗಾಗಿ ಮೂರು ಕಿಮೀಗಿಂತ ಹೆಚ್ಚಿನ ದೂರವನ್ನು ಕ್ರಮಿಸುವ ಪ್ರೌಢಶಾಲಾ ವಿದ್ಯಾರ್ಥಿಗಳ ಬಸ್ ಪ್ರಯಾಣ ದರವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಪ್ರಕಟಿಸಿದ್ದಾರೆ.
ಪ್ರಾಥಮಿಕ ಶಿಕ್ಷಣ ಕುರಿತ ಡಾ. ರಾಜಾ ರಾಮಣ್ಣ ನೇತೃತ್ವದ ಕಾರ್ಯಪಡೆಯ ಶಿಫಾರಸ್ಸಿನ ಅನ್ವಯ ಸರ್ಕಾರ ಈ ಕ್ರಮ ಕೈಗೊಳ್ಳಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವಿಶ್ವನಾಥ್ ಹೇಳಿದರು. ರಾಜ್ಯದಲ್ಲಿನ ಪ್ರೌಢಶಾಲೆಗಳ ಪೈಕಿ 70 ಕ್ಕೂ ಹೆಚ್ಚು ಶಾಲೆಗಳಲ್ಲಿ 50 ಕ್ಕಿಂತಲೂ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಈ ಶಾಲೆಗಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸಲಾಗುವುದು ಎಂದರು.
30 ಕ್ಕೂ ಹೆಚ್ಚು ಜೂನಿಯರ್ ಕಾಲೇಜುಗಳನ್ನು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವುದರಿಂದ ಬೇರೆಡೆ ವಿಲೀನಗೊಳಿಸಬೇಕಾಗಿದೆ ಹಾಗೂ ಅಗತ್ಯ ವಿದ್ಯಾರ್ಥಿಗಳ ಸಂಖ್ಯೆಯಿಲ್ಲದ 230 ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಬೇಕಾಗಿದೆ ಎಂದು ವಿಶ್ವನಾಥ್ ಹೇಳಿದರು. ಅಗತ್ಯ ವಿದ್ಯಾರ್ಥಿಗಳು ಇಲ್ಲದ 2000 ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಶಿಕ್ಷಣ ಸಚಿವರ ತೀರ್ಮಾನ ಸಮಾಜದ ವಿವಿಧ ಗಣ್ಯರ ಕಟು ಟೀಕೆಗೆ ಗುರಿಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications