ಜಾಗತಿಕ ವಿಸ್ತರಣೆಯತ್ತ ಸ್ಥಳೀಯ ಸಾಫ್ಟ್ವೇರ್ ದೈತ್ಯ ವಿಪ್ರೋ
ಕೋಲ್ಕತಾ : ಜಾಗತಿಕ ವಿಸ್ತರಣೆಯ ಹಂಬಲದಲ್ಲಿರುವ ದೇಶೀಯ ಸಾಫ್ಟ್ವೇರ್ ದೈತ್ಯ ವಿಪ್ರೋ, ಬರುವ ಆರ್ಥಿಕ ವರ್ಷದಲ್ಲಿ ಅಮೆರಿಕದ ಸಾಫ್ಟ್ವೇರ್ ಕಂಪನಿಯಾಂದನ್ನು ತನ್ನ ತೆಕ್ಕೆಗೊಳಪಡಿಸಿಕೊಳ್ಳಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಾಲ್ಕೈದು ಅಮೆರಿಕನ್ ಸಾಫ್ಟ್ವೇರ್ ಕಂಪನಿಗಳ ಪಟ್ಟಿಯನ್ನೂ ತಯಾರಿಸಿದೆ.
ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ವಿಪ್ರೋದ ಅಧ್ಯಕ್ಷ ಅಜೀಂ ಪ್ರೇಂಜಿ ವಿಪ್ರೋದ ಜಾಗತಿಕ ವಿಸ್ತರಣೆಯ ವಿಷಯವನ್ನು ತಿಳಿಸಿದರು. ನಾವು ಕೆಲವು ಯುಎಸ್ ಕಂಪನಿಗಳನ್ನು ಖರೀದಿಸಲು ಉದ್ದೇಶಿಸಿದ್ದೇವೆ. ಈ ಬಗ್ಗೆ ಇತ್ತೀಚಿನ ತಿಂಗಳುಗಳಲ್ಲಿ ಮಾತುಕತೆಗಳೂ ನಡೆದಿವೆ ಎಂದು ಪ್ರೇಂಜಿ ಹೇಳಿದರು.
ಇತ್ತೀಚಿನ ದಿನಗಳಲ್ಲಿ ಇತರ ಕಂಪನಿಗಳನ್ನು ಮತ್ತೊಂದು ಕಂಪನಿ ಸ್ವಾಧೀನಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ದುಬಾರಿಯಾಗಿ ಪರಿಣಮಿಸಿರುವುದರಿಂದ, ನಾವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿದ್ದೇವೆ, ಹಂತಹಂತವಾಗಿ ಮುಂದುವರಿಯುತ್ತಿದ್ದೇವೆ ಎಂದರು. ನಾವು ಈಗಲೂ ಭಾರತೀಯ ಕಂಪನಿಯಾಗಿಯೇ ಉಳಿದಿದ್ದೇವೆ. ನಮ್ಮ ಹಾಗೂ ಅಮೆರಿಕದ ಸಾಂಸ್ಕೃತಿಕ ಹಿನ್ನೆಲೆಗಳು ಭಿನ್ನವಾಗಿರುವ ವಿಷಯವೂ ನಮ್ಮ ಮುಂದಿದೆ ಎಂದು ಹೇಳುವ ಮೂಲಕ ಜಾಗತಿಕ ವಿಸ್ತರಣೆಯ ವಿಷಯ ಸಾಕಷ್ಟು ಜಟಿಲವಾದುದು ಎನ್ನುವ ಇಂಗಿತವನ್ನು ಪ್ರೇಂಜಿ ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications