ವ್ಯಾಪಾರಿ ನೀತಿಯಲ್ಲಿ ಬದಲಾವಣೆ : ರೂಪುರೇಷೆಗೆ ಸಮಾಲೋಚನೆ
ಬೆಂಗಳೂರು : ರಾಜ್ಯವನ್ನು ಹೂಡಿಕೆ ಮಿತ್ರನನ್ನಾಗಿಸುವ ನಿಟ್ಟಿನಲ್ಲಿ ವ್ಯಾಪಾರಿ ನಿಯಂತ್ರಣ ನೀತಿಯಲ್ಲಿ ಬದಲಾವಣೆ ತರಲು ಕರ್ನಾಟಕ ಸರ್ಕಾರ ರೂಪುರೇಷೆ ಸಿದ್ಧಪಡಿಸುತ್ತಿದೆ.
ವಿವಿಧ ಇಲಾಖೆಗಳೊಂದಿಗೆ ಸಮಾಲೋಚಿಸಿ, ಕೈಗಾರಿಕಾ ಪ್ರಗತಿಗೆ ಅಗತ್ಯವಾದ ಸಲಹೆಗಳನ್ನು ಕಲೆಹಾಕಿ ಯೋಜನೆಯ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ರಾಜ್ಯ ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಕೈಗಾರಿಕಾ ಹೂಡಿಕೆದಾರರ, ಅದರಲ್ಲೂ ರಫ್ತು ಉದ್ದಿಮೆಕಾರರ ಮಿತ್ರ ಕ್ಷೇತ್ರ ಹಾಸನವನ್ನು ವಿಶೇಷ ಆರ್ಥಿಕ ವಲಯ ಎಂದು ಘೋಷಿಸಬೇಕೆಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ತಮಿಳುನಾಡು ಹಾಗೂ ಗುಜರಾತ್ ರಾಜ್ಯಗಳಲ್ಲಿ ಇಂಥ ವಲಯಗಳನ್ನು ಕಳೆದ ವರ್ಷದ ಬಜೆಟ್ಟಿನಲ್ಲೇ ಕೇಂದ್ರ ಸರ್ಕಾರ ಪರಿಚಯಿಸಿದೆ ಎಂದು ಸಚಿವರು ಹೇಳಿದರು.
ಏಪ್ರಿಲ್ 16 ಹಾಗೂ 17ರಂದು ವಿಶ್ವಬ್ಯಾಂಕ್ ಸಹಯೋಗದಲ್ಲಿ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ವ್ಯಾಪಾರಿ ವಾತಾವರಣದ ಅಭಿವೃದ್ಧಿ ಎಂಬ ವಿಷಯ ಕುರಿತ ಕಮ್ಮಟವೊಂದನ್ನು ಕರ್ನಾಟಕ ಸರ್ಕಾರ ಆಯೋಜಿಸಿದೆ. ಸರ್ಕಾರದ ಪ್ರತಿನಿಧಿಗಳಲ್ಲದೆ ವಿವಿಧ ಕೈಗಾರಿಕಾ ತಜ್ಞರು ಕಮ್ಮಟದಲ್ಲಿ ತರಾವರಿ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎಂದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications