ಘಟಪ್ರಭ ನದಿಗೆ ಕಟ್ಟಿರುವ ಬ್ಯಾರೇಜ್ ಶುಕ್ರವಾರ ಉದ್ಘಾಟನೆ
ಬಿಜಾಪುರ : ಮುಧೋಳ ತಾಲೂಕಿನ ಇಂಗಳಗಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬ್ಯಾರೇಜ್ನ ಉದ್ಘಾಟನೆ ಏ. 13ರ ಶುಭ ಶುಕ್ರವಾರ ನೆರವೇರಲಿದೆ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಈ ಬ್ಯಾರೇಜ್ ಉದ್ಘಾಟಿಸುತ್ತಿದ್ದು, ಸಣ್ಣ ನೀರಾವರಿ ಸಚಿವ ಕುಮಾರ್ ಬಂಗಾರಪ್ಪ ಗಂಗಾಪೂಜೆ ಮಾಡಲಿದ್ದಾರೆ.
ಬ್ಯಾರೇಜ್ನ ಫಲಾನುಭವಿಗಳಾದ ನೀರು ಬಳಕೆದಾರ ರೈತರ ಸಂಘ ಹಾಗೂ ಇಂಗಳಗಿ - ಚಿಚಖಂಡಿ ಕೂಡು ರಸ್ತೆಗಳ ಉದ್ಘಾಟನೆಯೂ ಈ ಸಂದರ್ಭದಲ್ಲಿ ನೆರವೇರಲಿದ್ದು, ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಹಾಗೂ ಮಾಜಿ ಕೇಂದ್ರ ಸಚಿವ ಸಿದ್ಧು ನ್ಯಾಮಗೌಡ ಅನುಕ್ರಮವಾಗಿ ಸಂಘ ಹಾಗೂ ರಸ್ತೆಯ ಉದ್ಘಾಟನೆ ಮಾಡಲಿದ್ದಾರೆ.
ಕೃಷಿ ಮಾರುಕಟ್ಟೆ ಸಚಿವ ಆರ್.ಬಿ. ತಿಮ್ಮಾಪೂರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ನಾಡ ದೇವಿ ಶ್ರೀ ಭುವನೇಶ್ವರಿಯ ಪುತ್ಥಳಿಯನ್ನು ಸಣ್ಣ ಕೈಗಾರಿಕಾ ಸಚಿವ ಕಾಶಪ್ಪನವರ್ ಅನಾವರಣ ಮಾಡುತ್ತಾರೆ. ಗದಗ ತೋಂಟದಾರ್ಯ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಶಾಸಕ ಕಲೂತಿ, ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ್, ಡಾ. ಎಂ.ಪಿ. ನಾಡಗೌಡ, ಸಂಸತ್ ಸದಸ್ಯ ಆರ್.ಎಸ್. ಪಾಟೀಲ್ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಪಿ.ಬಿ. ಕಗಲಗೊಂಬ ಅವರು ತಿಳಿಸಿದ್ದಾರೆ.
(ಬಿಜಾಪುರ ಜಿಲ್ಲಾ ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications