ಲಕ್ಷದ್ವೀಪದಲ್ಲಿ ಸುಳಿಗಾಳಿ, ಕರುನಾಡಲ್ಲಿ ಮಳೆ
ಲಕ್ಷದ್ವೀಪ ಪ್ರದೇಶದಲ್ಲಿ ಗಾಳಿ ಸುತ್ತುತ್ತಿದೆಯಂತೆ. ಅಂದಮಾತ್ರಕ್ಕೆ ಅದೇನು ಚಂಡಮಾರುತವಲ್ಲ . ಆದರೆ, ಅದೇ ಮಾದರಿಯ ಮಥನ. ಅದರಿಂದಾಗಿ, ಅರಬ್ಬೀ ಸಮುದ್ರದಿಂದ ಹೊಂಟ ನೀರಾವಿ ಇಲ್ಲೆಲ್ಲಾ ತಂಪು ಚೆಲ್ಲುತ್ತಿವೆ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಮೂಲವನ್ನು ಹುಡುಕುತ್ತಾ ಹೊರಟಾಗ ಎಡವಿದ ಬಳ್ಳಿ ಹವಾಮಾನ ಇಲಾಖೆಯ ಮುಖ್ಯಸ್ಥ ಡಾ. ಕೊಪ್ಪಾರ್, ಗಾಳಿಯ ಮಥನದ ವಿಶ್ಲೇಷಣೆಯ ಮುಂದಿಡುತ್ತಾರೆ.
ಎಲ್ಲಿಯ ಲಕ್ಷದ್ವೀಪವೋ, ಅರಬ್ಬಿಯೋ, ರಾಜ್ಯದಲ್ಲಂತೂ ಮಳೆ ಬೀಳುತ್ತಿದೆ. ಈ ಮಳೆ ಕೇರಳದ ಕರಾವಳಿಯಲ್ಲೂ ಸುರಿಯುತ್ತಿದೆ. ರಾಜ್ಯದ ಕರಾವಳಿಯಲ್ಲಿ ಮಳೆಯ ತೀವ್ರತೆ ಅಧಿಕವಾಗಿದ್ದು , ಕುಂದಾಪುರದಲ್ಲಿ ವ್ಯಕ್ತಿಯಾಬ್ಬ ಸಿಡಿಲಿಗೆ ಬಲಿಯಾಗಿದ್ದಾನೆ. ಉಳಿದಂತೆ ಬೆಳ್ತಂಗಡಿಯ ಪುದುವೆಟ್ಟು ಸಮೀಪ ಮಿಂಚಿನ ಸುಳಿಗೆ ಸಿಕ್ಕು ಗಂಭೀರವಾಗಿ ಗಾಯಗೊಂಡಿರುವ ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಬೆಂಗಳೂರಿನಲ್ಲೂ ಎರಡು ದಿನಗಳಿಂದ ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದೆ. ನಗರದಲ್ಲಿ 34.4 ಮಿಮೀ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ. ಇದರಿಂದಾಗಿ, ನಗರದ ತಾಪಮಾನ ಗಮನಾರ್ಹ ಪ್ರಮಾಣದಲ್ಲಿ ಕುಸಿದಿದೆ. ಎರಡು ದಿನಗಳ ಹಿಂದಷ್ಟೇ 35 ಡಿಗ್ರಿ ಸೆಲ್ಷಿಯಸ್ ಆಸುಪಾಸಿನಲ್ಲಿ ಸುಳಿದಾಡುತ್ತಿದ್ದ ಗರಿಷ್ಠ ಉಷ್ಣಾಂಶ 27.6 ಡಿಗ್ರಿ ಸೆಲ್ಷಿಯಸ್ ಆದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿಗೆ ಕುಸಿದಿದೆ.
ಭಾನುವಾರದವರೆಗೂ ಇದೇ ರೀತಿಯ ತಂಪುಗಾಳಿ, ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಅಲ್ಲಿಗೆ, ಈ ವಾರದ ಕೊನೆಯಲ್ಲಿ ಬಂದಿರುವ ಸಾಲು ರಜೆಗಳು ಮನೆಯಲ್ಲೇ ಮುಗಿಯುತ್ತವೆ ಎಂದಾಯಿತು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications