ಭರಮಸಾಗರ ಬಳಿ ರಸ್ತೆ ಅಪಘಾತ : ಐದು ಜನರ ಸಾವು
ದಾವಣಗೆರೆ : ಭರಮಸಾಗರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟಾಟಾ ಸುಮೋ ಹಾಗೂ ಲಾರಿಯ ನಡುವೆ ಶುಕ್ರವಾರ ಸಂಜೆ ಸಂಭವಿಸಿದ ಮುಖಾಮುಖಿಯಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮುಂಬಯಿಯಿಂದ ಊಟಿಗೆ ಪ್ರವಾಸಕ್ಕೆಂದು ಬರುತ್ತಿದ್ದ 8 ಮಂದಿ ಇದ್ದ ಟಾಟಾ ಸುಮೋಗೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅಪಘಾತ ಸಂಭವಿಸಿತು. ಮತ್ತೊಂದು ಲಾರಿಯನ್ನು ಓವರ್ಟೆಕ್ ಮಾಡುವ ಯತ್ನದಲ್ಲಿ ತಮಿಳುನಾಡು ಕಡೆಯಿಂದ ಬರುತ್ತಿದ್ದ ಲಾರಿ ಟಾಟಾ ಸುಮೋಗೆ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸುಮೋ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟರು. 12ದ ಬಾಲಕಿ ಸೇರಿದಂತೆ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ಸೇರಿಸಲಾಗಿದೆ.
ಅಪಘಾತದಲ್ಲಿ ಸತ್ತವರನ್ನು ಸುಮೋ ಚಾಲಕ ಸಾದಿಕ್ (36), ಸಲಾಂ ಸಾಬ್ (38), ಶಾಹಿದಾ ಬೇಗಂ (40), ಲಿಯಾಖತ್ ಅಲಿ (40) ಹಾಗೂ ಗಫೂರ್ ಎಂದು ಗುರುತಿಸಲಾಗಿದೆ. ಲಾರಿಯ ಚಾಲಕ ಹಾಗೂ ಕ್ಲೀನರ್ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ಸೇರಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸ್ಥಳಕ್ಕೆ ಭೇಟಿ ನೀಡಿದ್ದು, ಭರಮಸಾಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ದಾವಣಗೆರೆ ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications