ಮುಂದಿನ ವರ್ಷದಿಂದಲೇ ಇಂಟರ್ನೆಟ್ ದೂರವಾಣಿ ಸೇವೆ
ನವದೆಹಲಿ : 2002ನೇ ಇಸವಿ ವೇಳೆಗೆ ದೇಶಾದ್ಯಂತ ಇಂಟರ್ನೆಟ್ ದೂರವಾಣಿಗೆ ಅವಕಾಶ ನೀಡಲಾಗುವುದು ಎಂದು ಕೇಂದ್ರ ಸಂಪರ್ಕಖಾತೆ ಸಚಿವ ರಾಮ್ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.
2002ನೇ ಏಪ್ರಿಲ್ 1ನೇ ತಾರೀಖಿನ ನಂತರ ದೇಶಾದ್ಯಂತ ಇಂಟರ್ನೆಟ್ ಫೋನ್ ಬಳಕೆಗೆ ಅವಕಾಶ ನೀಡಲಾಗುವುದು ಎಂದು ಪಾಸ್ವಾನ್ ತಿಳಿಸಿದ್ದಾರೆ. ಇದಕ್ಕೂ ಮೊದಲು 2004ನೇ ಇಸವಿಗೆ ಮೊದಲು ಇಂಟರ್ನೆಟ್ ಫೋನ್ಗೆ ಅವಕಾಶ ನೀಡಲಾಗುವುದಿಲ್ಲ ಎಂದು ಪ್ರಕಟಿಸಲಾಗಿತ್ತು.
ಪ್ರಸ್ತುತ ಗ್ರಾಮ ಹಾಗೂ ಪಟ್ಟಣಗಳಲ್ಲಿ ಇಂಟರ್ನೆಟ್ ಲಭ್ಯವಿಲ್ಲ. ಹೀಗಾಗಿ ಈಗ ಇಂಟರ್ನೆಟ್ ಫೋನ್ಗೆ ಅವಕಾಶ ನೀಡಿದರೆ ಅದು, ಇಂಟರ್ನೆಟ್ ಹೊಂದಿರುವ ಬಳಕೆದಾರರಿಗೆ ಮಾತ್ರ ಅನುಕೂಲವಾಗುತ್ತದೆ. ಆದಕಾರಣ ಎಲ್ಲ ಗ್ರಾಮಗಳಿಗೆ ಹಾಗೂ ಪಟ್ಟಣಗಳಿಗೆ ಇಂಟರ್ನೆಟ್ ಸೌಲಭ್ಯ ದೊರೆತ ಬಳಿಕ ನಾವು ಇಂಟರ್ನೆಟ್ ಫೋನ್ ಬಳಕೆಗೆ ಅವಕಾಶ ನೀಡುತ್ತೇವೆ ಎಂದರು.
ಇತ್ತೀಚೆಗಷ್ಟೇ ಸಮಿತಿಯಾಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ, ಇಂಟರ್ನೆಟ್ ಮೂಲಕ ಸಂಭಾಷಣೆ ನಡೆಸಲು ಅವಕಾಶ ನೀಡಬೇಕು ಎಂಬ ಸಲಹೆ ಮಾಡಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಈ ಸೇವೆಯ ಅನುಷ್ಠಾನದಿಂದ ದೂರದ ಪ್ರದೇಶಗಳ ಕರೆಗಳ ದರ ಗಮನಾರ್ಹವಾಗಿ ತಗ್ಗಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications