ಕೃಷ್ಣ ನಾಯಕತ್ವದಲ್ಲಿ ವಿಶ್ವಾಸ, ಕಾಂಗ್ರೆಸ್ಗೆ ಬಿ.ಬಿ. ಶಿವಪ್ಪ
ಬೆಂಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾದ ತೋಟಗಾರಿಕೆ ಸಚಿವ ಅಲ್ಲಂ ವೀರಭದ್ರಪ್ಪ , ಅಧ್ಯಕ್ಷ ಗಾದಿಯನ್ನೇರುವ ಒಂದು ದಿನ ಮೊದಲು ಬಿಜೆಪಿಯಿಂದ ಉಚ್ಛಾಟಿತರಾಗಿರುವ ಸಕಲೇಶಪುರದ ಶಾಸಕ ಬಿ.ಬಿ. ಶಿವಪ್ಪ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ನೂರಾರು ಮಂದಿ ಕಟ್ಟಾ ಅನುಯಾಯಿಗಳು ಹಾಗೂ ಅಭಿಮಾನಿಗಳೊಂದಿಗೆ ಶಿವಪ್ಪ ಭಾನುವಾರ ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷ ಸೇರಿದರು. ಇದರೊಂದಿಗೆ ಬಿಜೆಪಿಯಿಂದ ಅಮಾನತ್ತುಗೊಂಡ ನಂತರ ಯಾವ ಪಕ್ಷಕ್ಕೂ ಸೇರದೆ ಗೊಂದಲದಲ್ಲಿದ್ದ ಶಿವಪ್ಪನವರ ಅಜ್ಞಾತವಾಸ ಕೊನೆಗೊಂಡಿದೆ.
ಶಿವಪ್ಪನವರು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಮತ್ತಿತರ ಧುರೀಣರು ಹಾಜರಿದ್ದರು. ತಾವು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ಶಿವಪ್ಪ ಈ ಮುನ್ನವೇ ಪ್ರಕಟಿಸಿದ್ದರೂ, ಶಿವಪ್ಪನವರಿಗೆ ಕಾಂಗ್ರೆಸ್ನಲ್ಲಿ ಗಣನೀಯ ಸ್ಥಾನ ನೀಡುವ ಸಂಭವವಿದೆ ಎನ್ನಲಾಗಿದೆ.
ಶನಿವಾರ ನಡೆದ ಸಭೆಯಾಂದರಲ್ಲಿ ಶಿವಪ್ಪನವರನ್ನು ಕಾಂಗ್ರೆಸ್ ಪಕ್ಷದ ಅಲ್ಲಂ ವೀರಭದ್ರಪ್ಪ ಅವರ ಅಧಿಕಾರ ಸ್ವೀಕಾರದ ಮುನ್ನಾದಿನ ಸಹಸದಸ್ಯನನ್ನಾಗಿ ಸೇರಿಕೊಳ್ಳಲು ನಿರ್ಧರಿಸಲಾಗಿತ್ತು . ಶಿವಪ್ಪನವರ ಅಮಾನತು ಆದೇಶವನ್ನು ಬಿಜೆಪಿ ವಾಪಸ್ಸು ಪಡೆಯಬಹುದೆನ್ನುವ ನಿರೀಕ್ಷೆಯಲ್ಲಿ ಈ ತರಾತುರಿ ತೀರ್ಮಾನವನ್ನು ಕೈಗೊಳ್ಳಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications