ತಣ್ಣಗಾದ ತೆಹಲ್ಕಾ ಚಂಡಮಾರುತ, ಸಂಸತ್ತಿನಲ್ಲಿ ಇನ್ನು ತಂಗಾಳಿ !
ನವದೆಹಲಿ : ತೆಹಲ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ರಾಜೀನಾಮೆಗೆ ಪಟ್ಟು ಹಿಡಿದು ಸಂಸತ್ ಕಲಾಪಗಳನ್ನು ಬಹಿಷ್ಕರಿಸಿದ್ದ ಪ್ರತಿಪಕ್ಷಗಳು, ಮಂಗಳವಾರದಿಂದ ಉಭಯ ಸದನದ ಕಲಾಪಗಳಲ್ಲಿ ಭಾಗವಹಿಸಲು ನಿರ್ಧರಿಸಿವೆ.
ಲೋಕಸಭಾ ಸ್ಪೀಕರ್ ಜಿಎಂಸಿ ಬಾಲಯೋಗಿ ಅವರು ಸೋಮವಾರ ಬೆಳಿಗ್ಗೆ ಕರೆದಿದ್ದ ರಾಜಕೀಯ ಧುರೀಣರ ಸಭೆಯಲ್ಲಿ , ಮಂಗಳವಾರದಿಂದ ಕಲಾಪಕ್ಕೆ ಹಾಜರಾಗುವುದಾಗಿ ಹಾಗೂ ಕಲಾಪಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ರಾಜಕೀಯ ಪಕ್ಷಗಳ ಧುರೀಣರು ಬಾಲಯೋಗಿ ಅವರಿಗೆ ಭರವಸೆ ನೀಡಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಮೋದ್ ಮಹಾಜನ್ ಈ ವಿಷಯವನ್ನು ಸ್ದುದಿಗಾರರಿಗೆ ತಿಳಿಸಿದರು.
ಈ ಮುನ್ನ ಮಾರ್ಚ್ 10 ರಿಂದ ಪ್ರಾರಂಭವಾಗಿದ್ದ ಅಧಿವೇಶನವನ್ನು 10 ದಿನಗಳ ಕಾಲ ಪ್ರತಿಪಕ್ಷಗಳ ಸದಸ್ಯರು ತಡೆಗಟ್ಟಿದ್ದರಿಂದ ಕಲಾಪಗಳನ್ನು ಮುಂದೂಡಲಾಗಿತ್ತು . ಪ್ರಸ್ತುತ, ಸಂಸತ್ತಿನಲ್ಲಿ ಯಾವುದೇ ಚರ್ಚೆಗೆ ಸಿದ್ಧ ಎಂದು ಸರ್ಕಾರವು ಘೋಷಿಸಿರುವುದರಿಂದ ಪ್ರತಿಪಕ್ಷಗಳು ತಮ್ಮ ಪಟ್ಟನ್ನು ಸಡಿಲಿಸಿವೆ.
ಈ ನಡುವೆ, ಬಾಲಯೋಗಿ ಅವರ ನೇತೃತ್ವದಲ್ಲಿ ಸೋಮವಾರ ನಡೆದ ರಾಜಕೀಯ ಪಕ್ಷಗಳ ಸಭೆಯಲ್ಲಿ ಎರಡನೇ ಹಂತದ ಅಧಿವೇಶನವನ್ನು ಬೇಗನೆ ಮುಗಿಸುವಂತೆ ಕೆಲವು ಸದಸ್ಯರು ಸಲಹೆ ಮಾಡಿದ್ದಾರೆ. ಮೇ 10 ರಂದು ಕೆಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳ ಪ್ರಚಾರದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಏಪ್ರಿಲ್ ಕೊನೆಗೆ ಅಧಿವೇಶನವನ್ನು ಮುಕ್ತಾಯಗೊಳಿಸಲು ಈ ಸದಸ್ಯರು ಸೂಚಿಸಿದ್ದಾರೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications