ಪಟ್ಟು ಬಿಡದ ಕಾಂಗ್ರೆಸ್ : ಸುಗಮ ಸಂಸತ್ ಕಲಾಪದ ಕನಸು ಭಗ್ನ ?
ನವದೆಹಲಿ : ತೆಹಲ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಎನ್.ಡಿ.ಎ. ನೇತೃತ್ವದ ಕೇಂದ್ರ ಸರಕಾರದ ರಾಜೀನಾಮೆಗೆ ಹಠ ಹಿಡಿದು, ಬಜೆಟ್ ಅಧಿವೇಶನದ ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದ ಪ್ರತಿಪಕ್ಷಗಳು ತಮ್ಮ ಪಟ್ಟನ್ನು ಸಡಿಲಿಸಿ, ಮಂಗಳವಾರದಿಂದ ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡುತ್ತವೆ ಎನ್ನುವ ಸುದ್ದಿಯ ಹಿಂದೆಯೇ ಕಾಂಗ್ರೆಸ್‌ನಿಂದ ಪ್ರತಿಕೂಲ ಹೇಳಿಕೆ ಬಂದಿದೆ.
ಕೇಂದ್ರ ಸರಕಾರ ರಾಜೀನಾಮೆ ನೀಡುವ ತನಕ ಸಂಸತ್ ಕಲಾಪಕ್ಕೆ ತಮ್ಮ ಪಕ್ಷ ಅಡ್ಡಿ ಪಡಿಸಿಯೇ ಪಡಿಸುತ್ತದೆ ಎಂದು ಸೋಮವಾರ ಕಾಂಗ್ರೆಸ್ ಪಕ್ಷದ ವಕ್ತಾರ ಎಸ್. ಜಯಪಾಲ ರೆಡ್ಡಿ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಅವರು ತೆಹಲ್ಕಾ ಆರೋಪಿಗಳಿಗೆ ಶಿಕ್ಷೆ ಆಗುವ ತನಕ ತಮ್ಮ ಈ ಹೋರಾಟ ಮುಂದುವರಿಯಲಿದೆ ಎಂದರು.
ತಮ್ಮ ಪಕ್ಷ ಸುಗಮವಾಗಿ ಸಂಸತ್ ಕಾಲಾಪಗಳು ನಡೆಯಬೇಕು ಎಂಬುದನ್ನೇ ಬಯಸುತ್ತದೆ. ಆದರೆ, ತೆಹಲ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಸರಕಾರ ನಿಷ್ಪಕ್ಷಪಾತವಾಗಿ ವರ್ತಿಸುತ್ತಿಲ್ಲ. ಈ ಹಗರಣದಲ್ಲಿ ಕೇಂದ್ರ ಸರಕಾರದ ನಿಜವಾದ ಬಣ್ಣ ಬಯಲಾಗಿದೆ ಎಂದರು. ಸೋಮವಾರ ಸೋನಿಯಾಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದೂ ಅವರು ತಿಳಿಸಿದರು.
ತೆಹಲ್ಕಾ ಹಗರಣವನ್ನು ಮುಚ್ಚಿಕೊಳ್ಳಲು ತಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಗುರಿಯಾಗಿಟ್ಟುಕೊಂಡಿರುವ ಭಾರತೀಯ ಜನತಾಪಕ್ಷದ ಧೋರಣೆಯನ್ನು ರೆಡ್ಡಿ ಖಂಡಿಸಿದರು.
(ಇನ್‌ಫೋ ಪ್ರತಿನಿಧಿಯಿಂದ)
ಮುಖಪುಟ / ಇವತ್ತು... ಈ ಹೊತ್ತು...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications