ಎಂಥ ಮಳೆಯಯ್ಯ ಇದು ಎಂಥ ಮಳೆಯೋ..
ಬೆಂಗಳೂರು : ಅಕಾಲದಲ್ಲಿ ಇದೆಂಥಾ ಮಳೇರೀ.. ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ. ಅಲ್ಲ , ಯುಗಾದಿ ಕಳೆದ ಮೇಲೆ ಒಂದು ಹದ ಮಳೆ ಬರತ್ತೆ ನಿಜ, ಆದರೆ, ಹೀಗೆ 3 -4 ದಿನ ಜಡಿ ಮಳೆ ಉಂಟೆ? ಇದೇನು ಸ್ವಾತಿ ಮಳೆಯೇ ಎಂದು ಒಬ್ಬರನ್ನೊಬ್ಬರು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಲ್ಲಿ ಈಹೊತ್ತು (ಸೋಮವಾರ ಮಧ್ಯಾಹ್ನ) ಮಳೆ ಸುರಿಯುತ್ತಿದೆ. ದೊರದಲ್ಲೆಲ್ಲೋ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ರಸ್ತೆಯೇ ಕಾಣದಂತೆ, ಗುಡುಗು ಸಹಿತ ಸುರಿಮಳೆ ಸುರಿಯುತ್ತಿದೆ. ಒಂದೆರಡು ತಿಂಗಳಿಂದ ಕಾದ ಹೆಂಚಾಗಿದ್ದ ಭೂಮಿ ಸಂಪೂರ್ಣ ತಣ್ಣಗಾಗಿದೆ.
ಭಾನುವಾರ ಬೆಳಗ್ಗೆ ಕೊಂಚ ಬಿಡುವುಕೊಟ್ಟಿದ್ದ ಮಳೆ ಮತ್ತೆ ಸಂಜೆಗೆಲ್ಲಾ ಶುರುವಾಯಿತು. ಹೆಚ್ಚೂ ಕಡಿಮೆ ರಾತ್ರಿ 11 ಗಂಟೆಯವರೆಗೂ ನಿಲ್ಲದೆ ಸುರಿಯಿತು. ಏಪ್ರಿಲ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸುರಿದಿರುವ ದಾಖಲೆಯ ಮಳೆ ಇದು. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಲ್ಲಿ ಹತ್ತಿರ ಹತ್ತಿರ 85 ಮಿಲಿ ಮೀಟರ್ ಮಳೆ ಆಗಿದೆ. ಯಲಹಂಕ ವಾಯುಪಡೆ ವಿಮಾನ ನಿಲ್ದಾಣದಲ್ಲಿ ಮೊನ್ನೆ 9 ಸೆಂಟಿ ಮೀಟರ್‌ನಷ್ಟು ಮಳೆ ಬಿದ್ದಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆಗಿದ್ದರೆ, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಬಾಳೆ ಹೊನ್ನೂರಿನಲ್ಲಿ 6 ಸೆಂಟಿ ಮೀಟರ್, ಕೋಲಾರದಲ್ಲಿ 5, ಶಿರಾದಲ್ಲಿ 4, ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಸೆಂಟಿ ಮೀಟರ್ ಮಳೆ ಬಿದ್ದಿದೆ. ರಾಜ್ಯದ ಗರಿಷ್ಠ ಉಷ್ಣಾಂಶದಲ್ಲಿ ಕೂಡ ಸ್ವಲ್ಪ ಬದಲಾವಣೆ ಆಗಿದೆ. ದಕ್ಷಿಣ ಒಳನಾಡಿನಲ್ಲಿ ಅದು ಸಾಮಾನ್ಯ ಮಟ್ಟಕ್ಕಿಂತಲೂ ಕಡಿಮೆ ಇತ್ತು. ಕರಾವಳಿಯಲ್ಲಿ ಸಾಮಾನ್ಯವಾಗಿತ್ತು.
ರಾಜ್ಯದ ಅತಿ ಹೆಚ್ಚಿನ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿತ್ತು. ಮುನ್ಸೂಚನೆಯ ರೀತ್ಯ ಮುಂದಿನ 36 ಗಂಟೆಗಳ ಅವಧಿಯಲ್ಲಿ ಕರಾವಳಿಯೂ ಸೇರಿದಂತೆ ರಾಜ್ಯದ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಸುರಿಮಳೆ ಬೀಳುವ ಸಂಭವ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಭಾಗಶಃ ಮೋಡ ಕವಿದಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆ ಆಗಲಿದೆ. ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ತಲುಪುವ ಸೂಚನೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications