ಬೀದರ್ನಲ್ಲಿ ಲಾಕಪ್ ಡೆತ್, ಇಬ್ಬರು ಪೊಲೀಸರ ಅಮಾನತು
ಬೀದರ್: ಇಲ್ಲಿನ ಗಾಂಧಿ ಗಂಜ್ ಪೊಲೀಸ್ ಠಾಣೆಯ ಲಾಕಪ್ನಲ್ಲಿ ಮಂಗಳವಾರ ಬೆಳಿಗ್ಗೆ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿಗಂಜ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಶಹಾಗಂಜ್ನ ನಿವಾಸಿ ಮಾರುತಿ ವಿಶ್ವನಾಥ ಕೋಳಿ (25) ಎಂಬ ಆಟೋ ಚಾಲಕನನ್ನು ಅನೈತಿಕ ಸಂಬಂಧದ ಆರೋಪದ ಮೇರೆಗೆ ಸೋಮವಾರ ಬೆಳಿಗ್ಗೆ ಬಂಧಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಆತ ತನ್ನ ಲುಂಗಿಯಿಂದ ಲಾಕಪ್ನಲ್ಲಿದ್ದ ಕಬ್ಬಿಣದ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿಯೇ ಈ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಈ ಲಾಕಪ್ ಡೆತ್ಗೆ ಸಂಬಂಧಿಸಿ ಠಾಣೆಯ ಪಿ.ಎಸ್.ಐ ಶಿವಣ್ಣ ಮತ್ತು ಪೊಲೀಸ್ ಪೇದೆ ಶರಣಪ್ಪಾ ಎಂಬವರನ್ನು ಅಮಾನತ್ತುಗೊಳಿಸಲಾಗಿದೆ. ಮೃತ ವ್ಯಕ್ತಿಯನ್ನು ಕಾನೂನು ಬಾಹಿರವಾಗಿ ಕಸ್ಟಡಿಯಲ್ಲಿಟ್ಟಿದ್ದರಿಂದ ಮೂವರು ಪೊಲೀಸರ ವಿರುದ್ಧ ಕ್ರಿಮಿ-ನಲ್ ಮೊಕದ್ದಮೆ ದಾಖಲಿಸಲಾಗಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications