ಜುಲೈನಿಂದ ಕೊಲ್ಲಿ ರಾಷ್ಟ್ರಗಳಲ್ಲಿ ಮೈಸೂರು ವಿವಿ ಮಾನ್ಯತಾ ಕೋರ್ಸ್
ಮೈಸೂರು : ಅಬುಧಾಬಿ, ದುಬೈ ಹಾಗೂ ಷಾರ್ಜಾಗಳಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಹೊಸ ಕೋರ್ಸುಗಳು ಬರುವ ಜುಲೈನಲ್ಲಿ ಪ್ರಾರಂಭವಾಗಲಿವೆ.
ನಾಲ್ಕು ವರ್ಷಗಳ ಅವಧಿಯ ಕಂಪ್ಯೂಟರ್ ಕೋರ್ಸ್, ಹೊಟೇಲ್ ಮ್ಯಾನೆಜ್ಮೆಂಟ್ ಹಾಗೂ ಬಿಬಿಎಂ ತರಗತಿಗಳನ್ನು ಇಂಡಿಯನ್ ಸ್ಕೂಲ್ಸ್ ನಡೆಸುವ ಸಂಸ್ಥೆಗಳಲ್ಲಿ ಶುರು ಮಾಡಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ. ಎಸ್.ಎನ್. ಹೆಗ್ಡೆ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಕಾಲೇಜುಗಳಲ್ಲಿ ಶುರುಮಾಡಲಾಗುವ ಕೋರ್ಸುಗಳಿಗೆ ವಿವಿ ಸಂಯೋಜನೆ ಕೊಡುವುದಿಲ್ಲ. ಆದರೆ ಮಾನ್ಯತೆ ನೀಡಲಿದೆ. ಇಂಡಿಯನ್ ಸ್ಕೂಲ್ಸ್ ನಡೆಸುವ ಶಿಕ್ಷಣ ಸಂಸ್ಥೆಗಳು ಉತ್ತಮ ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು, ಕೋರ್ಸುಗಳಿಗೆ ತಗಲುವ ವೆಚ್ಚವನ್ನು ಆಯಾ ಕಾಲೇಜುಗಳೇ ಭರಿಸಲಿವೆ. ಜೂನ್ 21ರ ನಂತರ ಉನ್ನತ ಶಿಕ್ಷಣ ಸಚಿವ ಡಾ.ಪರಮೇಶ್ವರ್, ಸಿಂಡಿಕೇಟ್ನ ಹಿರಿಯ ಸದಸ್ಯರು ಹಾಗೂ ತಮ್ಮನ್ನು ಒಳಗೊಂಡ ನಿಯೋಗ ಕೊಲ್ಲಿ ರಾಷ್ಟ್ರಗಳಿಗೆ ಪ್ರವಾಸ ಬೆಳೆಸಲಿದೆ ಎಂದು ಹೆಗ್ಡೆ ವಿವರಿಸಿದರು.
ಕುವೈತ್ನ ಕಾಲೇಜೊಂದರಲ್ಲೂ ಇದೇ ರೀತಿಯ ಕೋರ್ಸ್ಗಳನ್ನು ಪ್ರಾರಂಭಿಸಬೇಕೆಂಬ ಪ್ರಸ್ತಾವನೆ ಬಂದಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications