ಪ್ರತಿಪಕ್ಷ - ಆಡಳಿತ ಪಕ್ಷದ ನಡುವೆ ವಾಗ್ವಾದ, ಕಲಾಪಕ್ಕೆ ಅಡ್ಡಿ
ನವದೆಹಲಿ : ರಕ್ಷಣಾ ಇಲಾಖೆಗೆ ಸಂಬಂಧಿಸಿದ ತೆಹಲ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ ತನಿಖೆಯೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿರುವ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಿಂದಾಗಿ ಮೂರನೇ ದಿನವಾದ ಬುಧವಾರ ಸಹ ಸಂಸತ್ತಿನ ಉಭಯ ಸದನಗಳ ಕಲಾಪ ನಡೆಯಲಿಲ್ಲ.
ಘೋಷಣೆ - ಪ್ರತಿ ಘೋಷಣೆ ಲೋಕಸಭೆಯಲ್ಲಿ ಮಾರ್ದನಿಸಿತು. ಕಾಂಗ್ರೆಸ್ ಸದಸ್ಯರು ತಮ್ಮ ಪಟ್ಟು ಸಡಿಲಿಸಲು ಸಿದ್ಧರಿರಲಿಲ್ಲ. ಈ ಹಂತದಲ್ಲಿ ಲೋಕಸಭಾಧ್ಯಕ್ಷ ಜಿ.ಎನ್.ಸಿ. ಬಾಲಯೋಗಿ ಅವರು ಕಲಾಪವನ್ನು ಗುರುವಾರಕ್ಕೆ ಮುಂದೂಡಿದರು. ರಾಜ್ಯಸಭೆಯಲ್ಲಿ ಕೂಡ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಮೊದಲು ಮಧ್ಯಾಹ್ನದವರೆಗೆ ಮುಂದೂಡಲಾಗಿದ್ದ ಕಲಾಪವನ್ನು ಕೃಷ್ಣಕಾಂತ್ ಅವರು ಗುರುವಾರಕ್ಕೆ ಮುಂದೂಡಿದರು.
ಕಾಂಗ್ರೆಸ್ ಹಾಗೂ ರಾಷ್ಟ್ರೀಯ ಜನತಾದಳ ಸದಸ್ಯರು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಿದರು. ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಬಿರುಸಿನ ಮಾತುಕತೆ - ವಾಗ್ವಾದ ಅರಂಭವಾಯಿತು. ಕಲಾಪಕ್ಕೆ ಅಡ್ಡಿಯುಂಟಾದ ಹಿನ್ನೆಲೆಯಲ್ಲಿ ಸದನಗಳ ಮುಂದೂಡಿಗೆ ಅನಿವಾರ್ಯವಾಯಿತು.
ಸಂಸತ್ ಕಲಾಪಗಳು ಸುಗಮವಾಗಿ ನಡೆಯುಂತೆ ಮಾಡಲು ಲೋಕಸಭಾಧ್ಯಕ್ಷ ಬಾಲಯೋಗಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಮೋದ್ ಮಹಾಜನ್ ಅವರು ನಡೆಸಿದ ಸರ್ವಪಕ್ಷ ಸಭೆ ಕೂಡ ಫಲನೀಡಿಲ್ಲ ಎಂದು ವರದಿಯಾಗಿದೆ. ಇತರ ಪ್ರತಿಪಕ್ಷಗಳು ಸಹಕರಿಸುವ ಭರವಸೆ ನೀಡಿದ್ದರೂ, ಕಾಂಗ್ರೆಸ್ ಮಾತ್ರ ತನ್ನ ನಿಲುವು ಬದಲಿಸಿಕೊಳ್ಳಲು ಸಿದ್ಧವಿಲ್ಲ. ಸಂಸತ್ ಕಲಾಪ ಸುಗಮವಾಗಿ ನಡೆಸುವ ಪ್ರಯತ್ನಗಳು ಮಾತ್ರ ಮುಂದುವರಿದೇ ಇವೆ.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications