ನಾಲ್ಕು ದಶಕದ ದಾಖಲೆ ಮುರಿದಿದೆ ಮಳೆ
ಬೆಂಗಳೂರು : ನಾಲ್ಕು ದಶಕಗಳ ನಂತರ ಬೆಂಗಳೂರಲ್ಲಿ ದಾಖಲೆಯ ಮಳೆ ಆಗಿದೆ. 1962ನೇ ಇಸವಿಯಲ್ಲಿ 122.5 ಮಿ.ಮೀಟರ್ ಮಳೆ ಆಗಿತ್ತು. ಈ ವರ್ಷ ಈಗಾಗಲೇ 127.6 ಮಿ.ಮೀಟರ್ ಮಳೆ ಆಗಿದೆ. ಇನ್ನೂ ಮಳೆ ಆಗುತ್ತಲೇ ಇದೆ.
ಸಾಮಾನ್ಯವಾಗಿ ಏಪ್ರಿಲ್ ತಿಂಗಳಿನಲ್ಲಿ 44ರಿಂದ 48 ಮಿ.ಮೀಟರ್ ಮಳೆ ಮಾತ್ರ ಬೀಳುತ್ತದೆ. ಈ ವರ್ಷ ಬೆಂಗಳೂರಲ್ಲಿ ಆಕಾಶಕ್ಕೆ ತೂತು ಬಿದ್ದಿದೆ. ಮಂಗಳವಾರ ರಾತ್ರಿಯಿಡೀ ಮಳೆ ಆಯಿತು. ಹವಾಮಾನ ವೀಕ್ಷಣಾಲಯದ ವರದಿಗಳ ರೀತ್ಯ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಲ್ಲಿ 8 ಸೆಂಟಿ ಮೀಟರ್ ಮಳೆ ಆಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 6, ಯಲಹಂಕ ವಿಮಾನ ನಿಲ್ದಾಣದಲ್ಲಿ 5, ಚನ್ನರಾಯಪಟ್ಟಣ, ಶ್ರವಣಬೆಳಗೊಳಗಳಲ್ಲಿ 2, ಗುಂಡ್ಲುಪೇಟೆಯಲ್ಲಿ 1 ಸೆಂಟಿ ಮೀಟರ್ ಮಳೆ ಆಗಿದೆ.
ರಾಜ್ಯದ ಅತಿ ಹೆಚ್ಚು ಉಷ್ಣಾಂಶ 36.5 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿತ್ತು. ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಮುನ್ಸೂಚನೆಯ ಪ್ರಕಾರ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆ ಬೀಳಲಿದೆ. ಕರಾವಳಿಯಲ್ಲಿ ಒಣಹವೆ ಇರಲಿದೆ.
ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಮಳೆ ಬೀಳುವ ಸಂಭವ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications