ಅಂತರಿಕ್ಷದಲ್ಲಿ ಜಿ ಸ್ಯಾಟ್1 ಕ್ಷೇಮ, ಉಭಯಕುಶಲೋಪರಿ ಸಾಂಪ್ರತ
ಬೆಂಗಳೂರು : ಶ್ರೀಹರಿಕೋಟಾದಿಂದ ಬುಧವಾರ ಗಗನಕ್ಕೆ ಚುಮ್ಮಿದ ಜಿ.ಎಸ್.ಎಲ್.ವಿ. ಉಪಗ್ರಹ ವಾಹನ ತಾನು ಹೊತ್ತೊಯ್ದ ಜಿ. ಸ್ಯಾಟ್ ಉಪಗ್ರಹವನ್ನು ನಿಗದಿತ ಕಕ್ಷೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.
ತನ್ನ ಕಕ್ಷೆ ಸೇರಿದ ಉಪಗ್ರಹವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಬುಧವಾರ ತನ್ನ ಕಕ್ಷೆ ಸೇರಿದ ಉಪಗ್ರಹವನ್ನು ಗುರುವಾರ ಬೆಳಗ್ಗೆ 5ಗಂಟೆ 5 ನಿಮಿಷಕ್ಕೆ ಭೂಸಮನ್ವಿತ ಕಕ್ಷೆಗೆ ತಲುಪಿಸುವಲ್ಲಿ ಹಾಸನದಲ್ಲಿರುವ ಇಸ್ರೋ ಕೇಂದ್ರದ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.
ನಾನೂರು ಟನ್ ತೂಕ ಹಾಗೂ 49.1 ಮೀಟರ್ ಉದ್ದದ ಜಿ.ಎಸ್.ಎಲ್.ವಿ. ಹೊತ್ತೊಯ್ದ 1540 ಕೆ.ಜಿ. ತೂಕದ ಪ್ರಾಯೋಗಿಕ ಸಂಪರ್ಕ ಉಪಗ್ರಹ ಜಿಸ್ಯಾಟ್ -1 ಹಾಲಿ 3000 ಕಿ.ಮೀಟರ್ ದೂರದಲ್ಲಿರುವ ಕಕ್ಷೆಯಲ್ಲಿದ್ದು, ಇದನ್ನು ಇನ್ನೂ ಎತ್ತರದ ಕಕ್ಷೆಗೆ ಸೇರಿಸುವ ಕಾರ್ಯ ಗುರುವಾರ ರಾತ್ರಿ 9.20ರ ನಂತರ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಶಂಸೆ : ಜಿ. ಸ್ಯಾಟ್ 1 ಉಪಗ್ರಹವು ಇಂಟರ್‌ನೆಟ್ ಸೇವೆಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಭಾರತದ ವಿಜ್ಞಾನಿಗಳು ಮಾಡಿದ ಈ ಸಾಧನೆಯನ್ನು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮುಕ್ತಕಂಠದಿಂದ ಪ್ರಶಂಸಿಸಲಾಯಿತು.
ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಕೊಂಡಾಡಿದರು.
ಕೃಷ್ಣ ಅಭಿನಂದನೆ : ಉಪಗ್ರಹವನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ ಹಾರಿಸಿದ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಭಿನಂದಿಸಿದ್ದಾರೆ. ಭಾರತೀಯ ವಿಜ್ಞಾನಿಗಳ ಈ ಸ್ವಾವಲಂಬಿ ಸಾಧನೆ ಒಂದು ಐತಿಹಾಸಿಕ ಸಾಧನೆ ಎಂದು ಇಸ್ರೋ ಅಧ್ಯಕ್ಷ ಡಾ. ಕಸ್ತೂರಿ ರಂಗನ್ ಅವರಿಗೆ ಬರೆದಿರುವ ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.
(ಇನ್‌ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications