ದೂ.ದ. ಲಂಚ ಪ್ರಕರಣ : ಕಮಲಾ ಹೆಮ್ಮಿಗೆಗೆ 3 ವರ್ಷ ಜೈಲು
ಬೆಂಗಳೂರು : ದೂರದರ್ಶನ ಧಾರಾವಾಹಿ ಪ್ರಸಾರ ಸಂಬಂಧ ಲಂಚ ಪಡೆದಿದ್ದಾರೆ ಎನ್ನುವ ಆರೋಪವನ್ನು ಎದುರಿಸುತ್ತಿದ್ದ ಪ್ರಸಾರ ಭಾರತಿ ಕಾರ್ಯಕ್ರಮದ ಅಧಿಕಾರಿ ಕಮಲಾ ಹೆಮ್ಮಿಗೆ ಅವರಿಗೆ ಸಿಬಿಐ ನಿಯೋಜಿತ ನ್ಯಾಯಾಲಯ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 5 ಸಾವಿರ ರುಪಾಯಿಗಳ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಹಣ ನೀಡಲು ವಿಫಲರಾದಲ್ಲಿ ಮತ್ತೆ ಮೂರು ತಿಂಗಳ ಕಾಲ ಆಪಾದಿತರು ಕಠಿಣ ಶಿಕ್ಷೆಯನ್ನು ಅನುಭವಿಸಬೇಕು ಎಂದು ತೀರ್ಮಾನ ನೀಡಿರುವ ನ್ಯಾಯಮೂರ್ತಿ ಜಿ.ಟಿ. ವೀರಭದ್ರಪ್ಪ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಪೊಲೀಸ್ ಮುಖ್ಯಸ್ಥ ಕೆ.ವೈ. ಗುರುಪ್ರಸಾದ್ ಪ್ರಕರಣದ ವಿಚಾರಣೆ ನಡೆಸಿ, ಆರೋಪ ಪಟ್ಟಿ ಸಲ್ಲಿಸಿದ್ದರು.
1992 ರಲ್ಲಿ ಲಂಚ ಸ್ವೀಕರಿಸಿದ ಆರೋಪವನ್ನು ಕಮಲಾ ಹೆಮ್ಮಿಗೆ ಎದುರಿಸಿದ್ದರು. ಮೈಲಾರಿ ಸರಸ ಎನ್ನುವ ಧಾರಾವಾಹಿ ಪ್ರಸಾರ ಸಂಬಂಧಿಸಿದಂತೆ ಧಾರಾವಾಹಿಯ ನಿರ್ಮಾಪಕರಿಂದ ಲಂಚದ ಪ್ರಥಮ ಕಂತು 10 ಸಾವಿರ ರುಪಾಯಿ ಪಡೆಯುವಾಗ ಸಿಕ್ಕಿಬಿದ್ದಿದ್ದ ಹೆಮ್ಮಿಗೆ, ಧಾರಾವಾಹಿ ಪ್ರಸಾರಕ್ಕೆ 50 ಸಾವಿರ ರುಪಾಯಿ ಲಂಚ ಕೇಳಿದ್ದರು ಎನ್ನುವ ಆರೋಪ ಎದುರಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications