ಸತ್ಯಸಾಯಿ ಹೈಟೆಕ್ ಆಸ್ಪತ್ರೆ ವಿದ್ಯುತ್ ಬಿಲ್ ಹೊರೆ ಹೊತ್ತ ಸರ್ಕಾರ
ಬೆಂಗಳೂರು : ಬಡವರು ಹಾಗೂ ದುಡಿಯುವ ವರ್ಗಕ್ಕೆ ಉಚಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುತ್ತಿರುವ ಸತ್ಯ ಸಾಯಿಬಾಬಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಾರ್ಷಿಕ ವಿದ್ಯುತ್ ವೆಚ್ಚವನ್ನು ಗರಿಷ್ಠ 2 ಕೋಟಿ ರುಪಾಯಿಗಳವರೆಗೆ ಭರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಎರಡು ಕೋಟಿ ರುಪಾಯಿಗಿಂತ ಹೆಚ್ಚಾದ ವಿದ್ಯುತ್ ಬಿಲ್ಲನ್ನು ಆಸ್ಪತ್ರೆಯೇ ಭರಿಸುತ್ತದೆ. ಮುಖ್ಯಮಂತ್ರಿ ಕೃಷ್ಣ ನೇತೃತ್ವದಲ್ಲಿ ಗುರುವಾರ ಸೇರಿದ ಸಂಪುಟ ಸಭೆ ಈ ತೀರ್ಮಾನವನ್ನು ಕೈಗೊಂಡಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು.
ದುಬಾರಿ ಚಿಕಿತ್ಸೆ ಕೈಗೆಟುಕದ ಮಂದಿಗೆ ನೆರವಾಗುವ ಹಿನ್ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಯಿಬಾಬಾ ಹೈಟೆಕ್ ಆಸ್ಪತ್ರೆ, ವಿದ್ಯುತ್ ಬಿಲ್ಲನ್ನು ಭರಿಸುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು . ಈ ಹಿನ್ನೆಲೆಯಲ್ಲಿ ಸಂಪುಟ ಸಭೆ, 2 ಕೋಟಿ ರು.ಗಳವರೆಗೆ ವಿದ್ಯುತ್ ಬಿಲ್ಲನ್ನು ಭರಿಸಲು ನಿರ್ಧರಿಸಿದೆ. 120 ತುರ್ತು ಚಿಕಿತ್ಸಾ ಹಾಸಿಗೆಗಳು ಸೇರಿದಂತೆ 333 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆ, ಹೃದ್ರೋಗ ಸಂಬಂಧಿ ದುಬಾರಿ ಮೊತ್ತದ ಕಾಯಿಲೆಗಳಿಗೆ ಉಚಿತ ಹಾಗೂ ಹೈಟೆಕ್ ಚಿಕಿತ್ಸೆ ನೀಡುತ್ತಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications