ಭೀಮಾ ನದಿಗೆ 2 ಟಿ.ಎಂ.ಸಿ. ನೀರು ಬಿಡಲು ಮಹಾರಾಷ್ಟ್ರಕ್ಕೆ ಮನವಿ
ಬೆಂಗಳೂರು : ತೀವ್ರ ನೀರಿನ ಸಮಸ್ಯೆಯಿಂದ ತತ್ತರಿಸಿರುವ ವಿಜಾಪುರ ಜಿಲ್ಲೆಯ ನಾಗರಿಕರ ನೀರಿನ ಬವಣೆ ನೀಗಿಸಲು ತತ್‌ಕ್ಷಣವೇ ಭೀಮಾ ನದಿಗೆ ಕನಿಷ್ಠ 2 ಟಿ.ಎಂ.ಸಿ. ನೀರನ್ನಾದರೂ ಬಿಡುವಂತೆ ಕರ್ನಾಟಕ ರಾಜ್ಯ ಸರಕಾರ ಮಹಾರಾಷ್ಟ್ರಕ್ಕೆ ಮನವಿ ಮಾಡಿದೆ.
ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದು, ರೈತರು ಕಂಗಾಲಾಗಿದ್ದರೆ, ಕುಡಿವ ನೀರೂ ದೊರಕದೆ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಜ್ಜಿನಿ ಜಲಾಶಯದಿಂದ ಕೂಡಲೇ ಭೀಮಾ ನದಿಗೆ 2 ಟಿ.ಎಂ.ಸಿ ನೀರು ಬಿಡುವಂತೆ ಮಹಾರಾಷ್ಟ್ರದ ನೀರಾವರಿ ಸಚಿವ ಅಜಿತ್ ಪವಾರ್ ಅವರೊಂದಿಗೆ ಮಾತುಕತೆ ನಡೆಸಿ, ಮಹಾರಾಷ್ಟ್ರ ಸರಕಾರವನ್ನು ಕೋರಲಾಗಿದೆ ಎಂದು ರಾಜ್ಯ ಬೃಹತ್ ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಅವರು ಹೇಳಿದ್ದಾರೆ.
ಪ್ರತಿಪಕ್ಷದ ನಾಯಕರಾದ ಪಿ.ಜಿ.ಆರ್. ಸಿಂಧ್ಯಾ ಹಾಗೂ ಎಂ.ಪಿ. ಪ್ರಕಾಶ್ ಅವರು ಭೀಮಾ ನದಿ ಪಾತ್ರದ ಜನರ ನೀರಿನ ಬವಣೆಯನ್ನು ಪ್ರತ್ಯಕ್ಷ ಕಂಡು ಬಂದಿದ್ದಾರೆ. ಅಲ್ಲಿನ ರೈತರ ಕಷ್ಟವನ್ನು ವಿವರಿಸಿದ್ದಾರೆ ಎಂದೂ ಸಚಿವರು ಹೇಳಿದರು.
ಬಿಜಾಪುರ ಜಿಲ್ಲೆಯ ಇಂಡಿ, ಸಿಂಧಗಿಯಲ್ಲಂತೂ ನೀರಿನ ಬವಣೆ ವಿಪರೀತವಾಗಿದೆ. ರಾಜ್ಯ ಸರಕಾರಕ್ಕೂ ಈ ಬಗ್ಗೆ ಕಾಳಜಿ ಇದೆ. ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಕಾಶಪ್ಪನವರು ಈಗಾಗಲೇ ನೀರು ಬಿಡುವಂತೆ ಕೋರಿ ಮಹಾರಾಷ್ಟ್ರ ನೀರಾವರಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರ ಮಾನವೀಯತೆಯನ್ನು ಎತ್ತಿಹಿಡಿಯಲು ನೀರು ಬಿಟ್ಟೇ ಬಿಡುತ್ತದೆ ಎಂಬ ನಂಬಿಕೆ ತಮಗಿದೆ ಎಂದೂ ಸಚಿವರು ಹೇಳಿದರು.
(ನಮ್ಮ ಪ್ರತಿನಿಧಿಯಿಂದ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications