ರಾಜ್ಯ ವೈದ್ಯಕೀಯ, ದಂತ ವೈದ್ಯಕೀಯಕಾಲೇಜು ಸೀಟುಗಳ ಹೆಚ್ಚಳ
ಬೆಂಗಳೂರು : ಶ್ರೀನಿವಾಸ ಟ್ರಸ್ಟ್‌ನ ವೈದೇಹಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ವೈಟ್‌ಫೀಲ್ಡ್‌ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಆಕ್ಷೇಪಣಾ ರಹಿತ ಪತ್ರ ನೀಡಿದೆ. ಇದರೊಂದಿಗೆ ನಗರದ ವೈದ್ಯಕೀಯ ಕಾಲೇಜುಗಳ ಪಟ್ಟಿಗೆ ಮತ್ತೊಂದು ಕಾಲೇಜು ಸೇರ್ಪಡೆಯಾದಂತಾಗಿದೆ. ಈ ಕಾಲೇಜು ಸ್ಥಾಪನೆಯಾದೊಡನೆ ಇನ್ನೂ 1 ಸಾವಿರ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕಲಿಕೆಗೆ ಅವಕಾಶ ಸಿಗಲಿದೆ.
ಗುರುವಾರ ಸುದ್ದಿಗಾರರೊಡನೆ ಮಾಡನಾಡುತ್ತಿದ್ದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಉಪ ಸಮಿತಿ ಕೊಟ್ಟಿರುವ ಎಲ್ಲಾ ಶಿಫಾರಸ್ಸುಗಳಿಗೂ ಸಂಪುಟ ಒಪ್ಪಿಗೆ ನೀಡಿದೆ ಎಂದರು. ಉಪ ಸಮಿತಿಯ ಶಿಫಾರಸ್ಸುಗಳು ಇಂತಿವೆ-
- ಯಾವುದೇ ಹೊಸ ಆಯುರ್ವೇದ ಕಾಲೇಜಿನ ಸ್ಥಾಪನೆಗೆ ಅನುಮತಿ ಕೊಡಕೂಡದೆಂಬ ಸರ್ಕಾರದ ಇತ್ತೀಚಿನ ನಿರ್ಧಾರಕ್ಕೆ ಬದ್ಧವಾಗಿ ಮಂಗಳೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆಯ ಪ್ರಸ್ತಾವವನ್ನು ರದ್ದು ಮಾಡಬೇಕು. ಆದರೆ ಉಡುಪಿ ಆಯುರ್ವೇದ ಕಾಲೇಜಿನಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು
- ರಾಜ್ಯದ ವಿವಿಧ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳ ಸಂಖ್ಯೆಯನ್ನು ಏರಿಸಬೇಕು. ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಅನಸ್ತೇಷಿಯಾ, ರೇಡಿಯಾಲಜಿ, ಪ್ಯಾಥಾಲಜಿ ಹಾಗೂ ಮೈಕ್ರೋಬಯಾಲಜಿ ಸ್ನಾತಕೋತ್ತರ ತರಗತಿಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಿಸಲಾಗಿದೆ. ಗುಲ್ಬರ್ಗಾದ ಎಂ.ಆರ್.ಮೆಡಿಕಲ್ ಕಾಲೇಜು, ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜು ಹಾಗೂ ಬೆಂಗಳೂರು ಕಮ್ಯಾಂಡ್ ಹಾಸ್ಪಿಟಲ್‌ಗಳಲ್ಲೂ ಸೀಟುಗಳ ಸಂಖ್ಯೆ ಹೆಚ್ಚಿಸಲಾಗಿದೆ
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications