ಕಾರ್ಖಾನೆಗೆ ನೀರು ನುಗ್ಗುವ ಭೀತಿ : ಕೆರೆಯನ್ನೇ ಒಡೆವ ಪ್ರಯತ್ನ
ಬೆಂಗಳೂರು : ಬೆಂಗಳೂರು ಹೊರವಲಯ ನೆಲಮಂಗಲ ಬಳಿ ಇರುವ ಪ್ರತಿಷ್ಠಿತ ಕಾರ್ಖಾನೆ ಹಾಗೂ ಅದರ ಆಸ್ಪತ್ರೆ ಕಟ್ಟಡಕ್ಕೆ ಕೆರೆಯ ನೀರು ನುಗ್ಗುವುದನ್ನು ತಪ್ಪಿಸಲು ಮಾದಾವರ ಕೆರೆಯನ್ನೇ ಒಡೆಯುವ ಪ್ರಯತ್ನದಲ್ಲಿದ್ದ ಎಂಟು ಮಂದಿ ದುಷ್ಕರ್ಮಿಗಳ ಪೈಕಿ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಸತತವಾಗಿ ದಾಖಲೆಯ ಮಳೆ ಸುರಿಯುತ್ತಿದ್ದು, ಮಾದಾವರ ಕೆರೆ ತುಂಬಿದೆ. ಇನ್ನೂ ಹೆಚ್ಚು ಮಳೆಯಾದರೆ, ಕೆರೆಯ ನೀರು ಕಾರ್ಖಾನೆಗೆ ಹಾಗೂ ಕಾರ್ಖಾನೆ ನಡೆಸುತ್ತಿದ್ದ ಆಸ್ಪತ್ರೆ ಕಟ್ಟಡಕ್ಕೆ ನುಗ್ಗುವ ಸಾಧ್ಯತೆ ಇತ್ತು. ಇದನ್ನು ತಪ್ಪಿಸಲು 8 ಮಂದಿ ದುಷ್ಕರ್ಮಿಗಳ ತಂಡ ಕೆರೆ ಒಡೆಯುವ ಪ್ರಯತ್ನದಲ್ಲಿದ್ದಾಗ, ಕೆರೆ ಕಾವಲು ಪಡೆಯವರು ದುಷ್ಕರ್ಮಿಗಳ ಬೆನ್ನು ಹತ್ತಿ ಆಪೈಕಿ ಮೂವರನ್ನು ಹಿಡಿದು ನೆಲಮಂಗಲ ಪೊಲೀಸರಿಗೆ ಒಪ್ಪಿಸಿದರು.
ಆರೋಪಿಗಳನ್ನು ಬಂಧಿಸಿದ ಬಳಿಕ ಪೊಲೀಸರು ಕೆರೆ ಒಡೆಯಲು ದುಷ್ಕರ್ಮಿಗಳು ತಂದಿದ್ದ ಹಾರೆ, ಗುದ್ದಲಿ ಮೊದಲಾದ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ಒಬ್ಬನನ್ನು ಅರವಿಂದ ಎಂದು ಗುರುತಿಸಲಾಗಿದೆ. ಇತರ ಆರೋಪಿಗಳ ಶೋಧ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೋಡಿಪಾಳ್ಯ ಸಮೀಪದ ಈ ಮಾದಾವರ ಕೆರೆಯನ್ನು ಮೀನು ಸಾಕಾಣಿಕೆಗೆ ಬಳಸಲಾಗುತ್ತಿದೆ. ಮೀನುಗಾರಿಕೆಗಾಗಿ ಈ ಕೆರೆಯನ್ನು ಗುತ್ತಿಗೆ ನೀಡಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications