ತಗ್ಗು ಪ್ರದೇಶದ ಜನರ ನಿದ್ದೆ ಗೆಡಿಸಿರುವ ಮಳೆ
ಬೆಂಗಳೂರು : ಬೆಂಗಳೂರಲ್ಲಿ ಮಳೆ ನಿಂತೇ ಇಲ್ಲ ಸ್ವಾಮಿ. ಬೆಳಗ್ಗೆ ಸುಂದರ ಬಿಸಿಲು. ಸಂಜೆ ಆದೊಡನೆ ಮೋಡಗಳೆಲ್ಲಾ ಒಂದೆಡೆ ಕಲೆಯುತ್ತವೆ. ಗುಡುಗು, ಸಿಡಿಲು ಎದೆ ಗುಂಡಿಗೆ ನಡುಗಿಸುತ್ತವೆ. ದಪ್ಪ ಹನಿಯ ಜೋರು ಮಳೆ ಎಲ್ಲೆಡೆ.
ತಗ್ಗು ಪ್ರದೇಶದ ಜನರಿಗಂತೂ ಮಳೆರಾಯ ನಿದ್ದೆಗೆಡಿಸಿದ್ದಾನೆ. ಮಳೆ ಎಂದರೆ ಇವರು ಬೆಚ್ಚಿ ಬೀಳುತ್ತಾರೆ. ಬೆಂಗಳೂರು ಒಳಚರಂಡಿ ಮಂಡಳಿಗೆ ಹಾಗೂ ಬೆಂಗಳೂರು ನಗರಪಾಲಿಕೆಗೆ ಬೆಂಗಳೂರಿಗರು ಹಿಡಿಶಾಪ ಹಾಕುತ್ತಿದ್ದಾರೆ. ಒಳಚರಂಡಿಯ ನೀರು ಹಾಗೂ ರಸ್ತೆಯಲ್ಲಿ ಹರಿವ ಮಳೆಯ ನೀರು ಮನೆಗಳಿಗೆಲ್ಲಾ ನುಗ್ಗುತ್ತಿದೆ. ರಾತ್ರಿಯಿಡೀ ಮನೆಗೆ ನುಗ್ಗಿದ ನೀರನ್ನು ಹೊರಗೆ ಹಾಕುವುದೇ ದೊಡ್ಡ ಕೆಲಸವಾಗಿದೆ.
ಬೆಂಗಳೂರು ಕೃಷ್ಣರಾಜ ಮಾರುಕಟ್ಟೆ, ಸಂಪಂಗಿರಾಮನಗರ, ವಿವೇಕನಗರವೇ ಮೊದಲಾದ ಸ್ಥಳಗಳೆಲ್ಲಾ ಜಲಾವೃತವಾಗಿವೆ. ರಾಜ್ಯದ ದಕ್ಷಿಣ ಒಳನಾಡಿನ ಅನೇಕ ಕಡೆ ಮಳೆ ಆಗಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಒಣಹವೆ ಇತ್ತು. ದೇವನಹಳ್ಳಿಯಲ್ಲಿ 4 ಸೆಂಟಿ ಮೀಟರ್, ಶ್ರೀರಂಗಪಟ್ಟಣ, ಸೋಮವಾರಪೇಟೆ, ಮಂಗಳವಾರಪೇಟೆಗಳಲ್ಲಿ 3, ಕೊಣನೂರಿನಲ್ಲಿ 1 ಸೆಂಟಿ ಮೀಟರ್ ಮಳೆ ಬಿದ್ದಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಮಟ್ಟಕ್ಕಿಂತ ಅಧಿಕವಾಗಿತ್ತು.
ರಾಜ್ಯದ ಅತಿ ಹೆಚ್ಚು ತಾಪಮಾನ 39.4 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿತ್ತು. ಮುನ್ಸೂಚನೆಯ ಪ್ರಕಾರ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಬೀಳುವ ಸಂಭವ ಇದೆ.
ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಮಳೆ ಬೀಳಲಿದೆ. ದಿನದ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಹುತೇಕ ಏಪ್ರಿಲ್ ತಿಂಗಳ ಅಂತ್ಯದವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ.-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications