ಮೈಸೂರು, ಬಿಜಾಪುರ, ಗುಲ್ಬರ್ಗಾ, ಹಾಸನದಲ್ಲಿ ಕಿರು ವಿಮಾನ ನಿಲ್ದಾಣ
ಬೆಂಗಳೂರು : ಬಿಜಾಪುರ, ಗುಲ್ಬರ್ಗಾ, ಹಾಸನ ಹಾಗೂ ಮೈಸೂರುಗಳಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ 170 ಕೋಟಿ ರುಪಾಯಿಗಳ ಅಂದಾಜು ಮೌಲ್ಯದ ಯೋಜನೆ ಸಿದ್ಧಪಡಿಸಲಾಗಿದ್ದು, ಈ ಪ್ರಸ್ತಾವವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಇಲ್ಲಿ ತಿಳಿಸಿದ್ದಾರೆ.
ಗುಲ್ಬರ್ಗಾದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಿಸಲು ಈ ಹಿಂದೆಯೇ ಭೂಮಿ ಸ್ವಾದೀನ ಪಡಿಸಿಕೊಳ್ಳಲಾಗಿತ್ತು. ಪ್ರಕ್ರಿಯೆಯೂ ಆರಂಭವಾಗಿತ್ತು. ಆದರೆ, ಈ ಜಾಗ ಸಾಕುವುದಿಲ್ಲ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯಪಟ್ಟಿದ್ದು, ಈಗ ಹೊಸದಾಗಿ 500 ಎಕರೆ ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಇದಕ್ಕಾಗಿ 3000 ಕೋಟಿ ರುಪಾಯಿ ವೆಚ್ಚ ತಗುಲಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗುವ ಕಿರು ವಿಮಾನ ನಿಲ್ದಾಣಗಳ ನಿರ್ಮಾಣ ಯೋಜನೆಗೆ ಕೇಂದ್ರ ಸರಕಾರದ ನೆರವು ನಿರೀಕ್ಷಿಸಲಾಗಿದೆ. ಕೇಂದ್ರದಿಂದ ನೆರವು ಸಿಗದಿದ್ದರೆ, ರಾಜ್ಯದಿಂದಲೇ ಸಂಪನ್ಮೂಲ ಕ್ರೋಡೀಕರಿಸುವ ಸಂಬಂಧ ಸೋಮವಾರ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗುವುದು ಎಂದರು.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಯ ಆರಂಭಿಕ ಪ್ರಕ್ರಿಯೆ ಚಾಲನೆಯಲ್ಲಿದ್ದು, ಎರಡು ಖಾಸಗಿ ಸಂಸ್ಥೆಗಳು ಮುಂದೆಬಂದಿವೆ. ಈ ತಿಂಗಳ 30ರೊಳಗೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಖರ್ಗೆ ತಿಳಿಸಿದರು. ಮುಂದಿನ ವರ್ಷ ಜನವರಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿ ಆರಂಭವಾಗುತ್ತದೆ ಎಂದೂ ಅವರು ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications