ಬೆಂಗಳೂರಲ್ಲಿ ಮೆಟ್ರೋ ಬಸ್ ಸಂಚಾರಕ್ಕೆ ಸ್ವೀಡನ್ ನೆರವು
ಬೆಂಗಳೂರು : ಬೆಂಗಳೂರಿನಲ್ಲಿ 60 ಕಿ.ಮೀಟರ್ ಮಾರ್ಗದಲ್ಲಿ ಮೆಟ್ರೋ ಬಸ್ ಸಂಚಾರ ಆರಂಭಿಸಲು ಯೋಜನೆ ಸಿದ್ದವಾಗಿದ್ದು, ಈ ಸೌಲಭ್ಯ ಕಲ್ಪಿಸಲು ಸ್ವೀಡನ್ ನೆರವು ಪಡೆಯಲು ನಿರ್ಧರಿಸಲಾಗಿದೆ.
ನಗರದಲ್ಲಿ ಮೆಟ್ರೋ ಬಸ್ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ಸ್ವೀಡನ್ ಸರಕಾರಕ್ಕೆ ಪ್ರಸ್ತಾವನೆಯನ್ನು ಕೇಂದ್ರ ಸರಕಾರದ ಮೂಲಕ ಕಳುಹಿಸಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ಸಗೀರ್ ಅಹ್ಮದ್ ಭಾನುವಾರ ಇಲ್ಲಿ ಹೇಳಿದ್ದಾರೆ.
ಈ ಯೋಜನೆಗೆ ಸ್ವೀಡಿಷ್ ಅಂತಾರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರ (ಸ್ವೀಡಾ) ಹಣಕಾಸು ಸಂಸ್ಥೆಗೆ ನೆರವು ನೀಡುವಂತೆ ಕೋರಲಾಗಿದೆ. ಸಂಸ್ಥೆ ಹಣಕಾಸು ನೆರವಿಗೆ ಒಪ್ಪಿಗೆ ನೀಡಿದ ನಂತರ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಮೊದಲ ಹಂತದಲ್ಲಿ ಮೆಟ್ರೋ ಬಸ್ ಸಂಚಾರ ಬೆಂಗಳೂರಿನ ಜಯನಗರ - ಶಿವಾಜಿನಗರ ನಡುವೆ ಸಂಚಾರ ಆರಂಭಿಸಲಿದೆ. ಈ ಯೋಜನೆಗೆ ಸುಮಾರು 40 ಕೋಟಿ ರುಪಾಯಿ ಆಗಲಿದೆ ಎಂದೂ ಸಚಿವರು ಹೇಳಿದರು. ನಗರಕ್ಕೆ ಆಗಮಿಸಿರುವ ಅಧ್ಯಯನ ತಂಡ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ, ತಂಡ ಅಂತಿಮ ವರದಿ ನೀಡಿದ ಬಳಿಕ ಸ್ವೀಡಾ ಆರ್ಥಿಕ ನೆರವಿನ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದರು.
ಸ್ವೀಡನ್ನ ಅಧ್ಯಯನ ತಂಡ ನೀಡಿದ ವರದಿ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದ ಸಚಿವರು, ಉದ್ದೇಶಿತ ಯೋಜನೆಯು ನಾಲ್ಕು ಹಂತಗಳಲ್ಲಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಮೊದಲ ಹಂತದ ಯೋಜನೆಗೆ ಸ್ವೀಡಾ ಹಣಕಾಸು ನೆರವು ನೀಡುತ್ತದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications