ತೆಹೆಲ್ಕಾ ತನಿಖೆಗೆ ಒಪ್ಪಿದ ಅಟಲ್, ಕಲಾಪಕ್ಕೆ ಅಡ್ಡಿಯಿಲ್ಲ ಸೋನಿಯಾ
ನವದೆಹಲಿ : ತೆಹಲ್ಕಾ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಲು ಸರಕಾರ ಮುಕ್ತ ಮನಸ್ಸಿನಿಂದ ಇದೆ ಎಂದು ಪ್ರಧಾನಿ ಹೇಳಿರುವುದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಮಂಗಳವಾರ ಬಜೆಟ್ ಕುರಿತ ಚರ್ಚೆ ನಡೆಸಲು ಒಪ್ಪಿಕೊಂಡಿದ್ದಾರೆ.
ಸೋಮವಾರ ರಾತ್ರಿ ಲೋಕಸಭಾಧ್ಯಕ್ಷ ಜಿಎಂಸಿ. ಬಾಲಯೋಗಿ ಅವರ ಸಮಕ್ಷಮದಲ್ಲಿ ಪ್ರಧಾನಿ ವಾಜಪೇಯಿ ಮತ್ತು ಸೋನಿಯಾ ಗಾಂಧಿ ನಡುವೆ ನಡೆದ ಮಾತುಕತೆಯಲ್ಲಿ ಈ ಒಪ್ಪಂದಕ್ಕೆ ಬರಲಾಗಿದೆ. ಗುರುವಾರದಂದು ಹಣಕಾಸು ಮಸೂದೆ ಅಂಗೀಕಾರವಾದ ಬಳಿಕ ತೆಹಲ್ಕಾ ಹಗರಣದ ಬಗ್ಗೆ ಜೆಪಿಸಿ ತನಿಖೆ ಆಗಬೇಕೆಂಬ ಕಾಂಗ್ರೆಸ್ನ ಬೇಡಿಕೆ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರುವುದಾಗಿ ವಾಜಪೇಯಿ ಭರವಸೆಯಿತ್ತಿದ್ದಾರೆ.
ಈ ತತ್ಕಾಲದ ಕದನ ವಿರಾಮವನ್ನು ಒಪ್ಪಿಕೊಂಡಿರುವ ಮಾತ್ರಕ್ಕೆ ಕಾಂಗ್ರೆಸ್ ತನ್ನ ನಿಲುವನ್ನು ಸಡಿಲಿಸಿದೆ ಎಂದೇನಲ್ಲ. ಹಣಕಾಸು ಮಸೂದೆ ಅಂಗೀಕಾರವಾದ ನಂತರ ಸರಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ಮತ್ತೆ ಚಳವಳಿ ನಡೆಸುತ್ತದೆ. ರಾಷ್ಟ್ರದ ಹಿತ ದೃಷ್ಟಿಯಿಂದ ಬಜೆಟ್ ಅಂಗೀಕಾರಕ್ಕೆ ಅನುಮತಿ ನೀಡುತ್ತಿದ್ದೇವೆ. ಜೆಪಿಸಿ ತನಿಖೆಯಾಗಬೇಕು ಎಂಬ ನಿಲುವಿನಿಂದ ಕಾಂಗ್ರೆಸ್ ಹಿಂದೆ ಸರಿಯುವುದು ದುಸ್ಸಾಧ್ಯ ಎಂದು ಸೋನಿಯಾ ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications