ಕಿರ್ಲೋಸ್ಕರ್ನ ಹರಿಹರ ಶಾಖೆ ಆರಂಭಿಸಲು ಸರಕಾರ ಸಿದ್ಧ
ದಾವಣಗೆರೆ : ಮೈಸೂರು ಕಿರ್ಲೋಸ್ಕರ್ ಕಂಪೆನಿಯ ಹರಿಹರ ಶಾಖೆಯನ್ನು ತೆರೆಯಲು ಸರಕಾರ ಸಿದ್ಧವಿದೆ ಎಂದು ಭಾರೀ ಕೈಗಾರಿಕೆ ಖಾತೆ ಸಚಿವ ಆರ್. ವಿ. ದೇಶಪಾಂಡೆ ಹೇಳಿದ್ದಾರೆ.
ಸೋಮವಾರ, ಮೈಸೂರು ಕಿರ್ಲೋಸ್ಕರ್ ಘಟಕದ ನೌಕರರ ಮನವಿ ಪತ್ರ ಸ್ವೀಕರಿಸಿ ಮಾತನಾಡುತ್ತಾ ಅವರು, ಕಿರ್ಲೋಸ್ಕರ್ ಕಂಪೆನಿಯ ಹರಿಹರ ಘಟಕವನ್ನು ಆರಂಭಿಸಲು ಸರಕಾರ ಆಸಕ್ತವಾಗಿದ್ದಂತೆ ಕಂಪೆನಿಯ ಆಡಳಿತ ಮಂಡಳಿ ಉತ್ಸುಕವಾಗಿಲ್ಲ ಎಂದರು.
ಸರಕಾರವು ಮಾತುಕತೆಗಾಗಿ ಕರೆದಾಗ ಕಂಪೆನಿಯ ಮಾಲಕರು ಯಾವುದೇ ಪ್ರತಿಕ್ರಿಯೆ ತೋರಿಸುತ್ತಿಲ್ಲ. ಕಂಪೆನಿಯನ್ನು ಹರಾಜು ಹಾಕುವುದರಿಂದ ನೌಕರವರ್ಗದ ಸಮಸ್ಯೆ ಪರಿಹಾರವಾಗುವುದಿಲ್ಲ , ಬದಲಾಗಿ ಸಮಸ್ಯೆಯ ಬಗ್ಗೆ ಸಾಕಷ್ಟು ಚರ್ಚೆಗಳಾಗಬೇಕು ಎಂದು ದೇಶಪಾಂಡೆ ಹೇಳಿದರು.
ಪ್ರಸ್ತುತ ಉಪ ಆಯುಕ್ತ ಕೆ. ಶಿವರಾಮ್ ಅವರಿಗೆ ಫ್ಯಾಕ್ಟರಿಯ ಸ್ಥಿತಿಗತಿಯನ್ನು ಪರಿಶೀಲಿಸಿ ವರದಿ ನೀಡುವಂತೆ ಆದೇಶಿಸಲಾಗಿದೆ. ವರದಿಯ ನಂತರ ಮುಂದಿನ ಕ್ರಮಗಳ ಬಗ್ಗೆ ಸರಕಾರ ಆಲೋಚಿಸುವುದು ಎಂದು ಅವರು ವಿವರಿಸಿದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications