ಆಪ್ಟಿಕ್ ಫೈಬರ್ ಕೇಬಲ್ ಅಳವಡಿಕೆ ವಿಳಂಬ :ಎಸ್.ಎಂ. ಕೃಷ್ಣ ಎಚ್ಚರಿಕೆ
ಬೆಂಗಳೂರು : ಕರ್ನಾಟಕ ರಾಜ್ಯದ ರಸ್ತೆಗಳ ಸುಧಾರಣೆಗೆ ವಿಶ್ವಬ್ಯಾಂಕ್ 1635 ಕೋಟಿ ರುಪಾಯಿ ಸಾಲದ ನೆರವು ನೀಡಲು ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಲೋಕೋಪಯೋಗಿ ಸಚಿವ ಧರ್ಮಸಿಂಗ್ ಈ ವಿಷಯವನ್ನು ಮಂಗಳವಾರ ಇಲ್ಲಿ ತಿಳಿಸಿದರು.
ಏಪ್ರಿಲ್ 16ರಿಂದ 20ನೇ ತಾರೀಖಿನವರೆಗೆ ವಾಷಿಂಗ್ಟನ್‌ನಲ್ಲಿ ನಡೆದ ಸಮಾವೇಶದಲ್ಲಿ ರಾಜ್ಯದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ಈ ಹಿಂದೆ ಶೇ. 72ರಷ್ಟು ಹಣಕಾಸು ನೆರವು ನೀಡಲು ನಿರ್ಧರಿಸಲಾಗಿತ್ತು, ಈಗ ನೆರವಿನ ಮೊತ್ತವನ್ನು ಶೇ.80ಕ್ಕೆ ಹೆಚ್ಚಿಸಲಾಗಿದೆ.
ಪುನರ್ವಸತಿಗೆ 487 ಕೋಟಿ ರುಪಾಯಿ, ಮರುವಸತಿಗೆ 31 ಕೋಟಿ ರುಪಾಯಿ ಹಾಗೂ ರಸ್ತೆಗಳ ಅಭಿವೃದ್ಧಿಗೆ ಉಳಿದ ಹಣವನ್ನು ಖರ್ಚು ಮಾಡಲಾಗುವುದು ಎಂದು ಧರ್ಮಸಿಂಗ್ ಹೇಳಿದರು. ಸುಮಾರು 2,300 ಕಿ.ಮೀಟರ್ ಉದ್ದ ರಸ್ತೆಗಳನ್ನು ನಾಲ್ಕು ವರ್ಷದ ಅವಧಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದ ಮುಖ್ಯಮಂತ್ರಿಗಳು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಪರಿಸರ ಒಪ್ಪಿಗೆಗೆ ಈ ತಿಂಗಳ 27ರಂದು ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.
ಎಚ್ಚರಿಕೆ : ನಗರದಲ್ಲಿ ಇಂಟರ್‌ನೆಟ್ ಸೇವೆ ಕಲ್ಪಿಸಲು ಅಳವಡಿಸಲಾಗುತ್ತಿರುವ ಆಪ್ಟಿಕ್ ಫೈಬರ್ ಕೇಬಲ್ ಅಳವಡಿಕೆ ಕಾರ್ಯದಲ್ಲಿ ಅಜಾಗರೂಕತೆ ವಹಿಸಿದರೆ ಅಥವಾ ಕಾಮಗಾರಿಯನ್ನು ನಿಗದಿತ ಕಾಲಮಿತಿಯಾಳಗೆ ಪೂರ್ಣಗೊಳಿಸದಿದ್ದರೆ, ಗುತ್ತಿಗೆದಾರ ಕಂಪನಿಗಳು ಇಟ್ಟಿರುವ ಇಡುಗಂಟನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಕೃಷ್ಣ ಎಚ್ಚರಿಕೆ ನೀಡಿದರು.
ಕೇಬಲ್ ಅಳವಡಿಕೆ ಕಾರ್ಯದಲ್ಲಿ ಆಗುತ್ತಿರುವ ಅನಗತ್ಯ ವಿಳಂಬದಿಂದಾಗಿ ಬೆಂಗಳೂರು ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇದೇ ಧೋರಣೆಯನ್ನು ಕಂಪನಿಗಳು ಮುಂದುವರಿಸಿದಲ್ಲಿ, ನಗರಪಾಲಿಕೆಯೇ ಈ ಕಾರ್ಯ ಪೂರ್ಣಗೊಳಿಸಿ, ಕಂಪನಿಗಳು ಇಟ್ಟಿರುವ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಲಾಗಿದೆ ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications